ಪಹಲ್ಗಾಮ್ ಗೆ ಅಮಿತ್ ಶಾ ಭೇಟಿ; ಪರಿಶೀಲನೆ, ಸಂತ್ರಸ್ತರ ಆಕ್ರಂದನ, ಸಂಕಟ! Video
ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯ ನಡೆಸಿದ ಜಮ್ಮು-ಕಾಶ್ಮೀರಕ್ಕೆ ಬುಧವಾರ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಳ ಪರಿಶೀಲನೆ ನಡೆಸಿದರು.
ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ದಿ ಸಂಸ್ಥೆ ಎಎನ್‌ಐ ಪೋಸ್ಟ್ ಮಾಡಿರುವ ವೀಡಿಯೊದಲ್ಲಿ, ದುಷ್ಕೃತ್ಯದಿಂದ ಪಾರಾದವರು ಕೈಮುಗಿದು ಅಮಿತ್ ಶಾ ಹಾಗೂ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗೌವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ತಮ್ಮ ಸಂಕಟ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.
ಈ ವೇಳೆ ಮಾತನಾಡಿದ ಅಮಿತ್ ಶಾ, ಮಾರಣಾಂತಿಕ ದಾಳಿ ನಡೆಸಿದ ಉಗ್ರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ. ಕಾಲ್ನಡಿಗೆ ಅಥವಾ ಕುದುರೆ ಮೂಲಕ ತೆರಳಬೇಕಾದ ಬೈಸರಾನ್ ಕಣಿವೆ ಪ್ರದೇಶದಲ್ಲಿ ಈ ದಾಳಿ ನಡೆದಿದೆ.
ಶ್ರೀನಗರದ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾದವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಭೀಕರ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಮಿತ್ ಶಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



