ಪಹಲ್ಗಾಮ್ ದಾಳಿಗೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಲಿಂಕ್ ಮಾಡಿ ಸೋಷಿಯಲ್ ಮೀಡಿಯಾ ಪೋಸ್ಟ್: ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ದೂರು ದಾಖಲಿಸಿದ್ದಾರೆ.

ಬೆಂಗಳೂರು: ರಾಹುಲ್ ಗಾಂಧಿಯವರ ವಿದೇಶ ಪ್ರವಾಸವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧ ಕಲ್ಪಿಸಿ ಅವಹೇಳನಕಾರಿಯಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ವಿಷಯ ಸಂಬಂಧವಾಗಿ ರಾಜ್ಯ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆ ಪೋಸ್ಟ್ ನ್ನು ಅಳಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ದೂರು ದಾಖಲಿಸಿದ್ದಾರೆ.
ರಾಹುಲ್ ಗಾಂಧಿಯವರ ವಿದೇಶ ಪ್ರವಾಸವನ್ನು ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಗೆ ಲಿಂಕ್ ಮಾಡುವ ಉದ್ದೇಶವನ್ನು ಈ ಪೋಸ್ಟ್ ಹೊಂದಿದೆ ಎಂದು ಧನಂಜಯ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿಯ ಕ್ರಮವು ರಾಹುಲ್ ಗಾಂಧಿಯವರ ಪ್ರತಿಷ್ಠೆಯನ್ನು ಹಾಳು ಮಾಡುವ ಮತ್ತು ಅವರ ಖ್ಯಾತಿಗೆ ಹಾನಿ ಮಾಡುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ಘಟನೆಯಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ರಾಷ್ಟ್ರದ ಸಮಗ್ರತೆಯನ್ನು ಕಾಪಾಡಿಕೊಳ್ಳುವಲ್ಲಿನ ತನ್ನ 'ವೈಫಲ್ಯ'ದಿಂದ ದೂರವಿರಿಸಲು ಬಿಜೆಪಿ ಮಾಡಿದ ಪ್ರಯತ್ನ ಇದಾಗಿದೆ ಎಂದು ಅವರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ, ಹೈಗ್ರೌಂಡ್ಸ್ ಪೊಲೀಸರು ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಹರಡಲು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 196 ಮತ್ತು 353(2) ರ ಅಡಿಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



