ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತದಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಕಿರುಕುಳ!
ದೇಶದ ವಿವಿಧ ಭಾಗಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಕಿರುಕುಳ, ನಿಂದನೆ ಮತ್ತು ಹಲ್ಲೆ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ ಆರೋಪಿಸಿದೆ.

ಶ್ರೀನಗರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಓರ್ವ ನಿವಾಸಿ ಸಾವನ್ನಪ್ಪಿದ ನಂತರ, ದೇಶದ ವಿವಿಧ ಭಾಗಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಕಿರುಕುಳ, ನಿಂದನೆ ಮತ್ತು ಹಲ್ಲೆ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ ಆರೋಪಿಸಿದೆ. ಡೆಹ್ರಾಡೂನ್‌ನ ಕಾಶ್ಮೀರಿ ವಿದ್ಯಾರ್ಥಿಗಳಿಂದ ನಮಗೆ ಹಲವಾರು ಕರೆಗಳು ಬರುತ್ತಿವೆ. ಹಿಂದೂ ರಕ್ಷಾ ದಳ ಬಿಡುಗಡೆ ಮಾಡಿದ ವೀಡಿಯೊದ ನಂತರ ವಿದ್ಯಾರ್ಥಿಗಳು ಬೆದರಿಕೆ ಮತ್ತು ಅಸುರಕ್ಷಿತ ಭಾವನೆ ಎದುರಿಸುತ್ತಿದ್ದಾರೆ. ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ 10 ಗಂಟೆಯೊಳಗೆ ಡೆಹ್ರಾಡೂನ್‌ನಿಂದ ಹೊರಹೋಗುವಂತೆ ಎಚ್ಚರಿಸಿದ್ದಾರೆ ಎಂದು ಜೆ & ಕೆ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹೇಹಮಿ ಹೇಳಿದ್ದಾರೆ.
ಪ್ರದೇಶದ ಹೊರಗೆ ಕಲಿಯುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪರಿಸ್ಥಿತಿ ಹೆಚ್ಚು ಹೆಚ್ಚು ಕಠೋರ ಮತ್ತು ತೀವ್ರವಾಗಿ ಕಳವಳಕಾರಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಬೆಂಬಲಿಸಲು ಸಂಘವು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಚಂಡೀಗಢದ ಡೆರಾಬಸ್ಸಿಯಲ್ಲಿರುವ ಯೂನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಿಂದಲೂ ನಮಗೆ ಕರೆಗಳು ಬಂದಿವೆ. ಅಲ್ಲಿ ರಾತ್ರಿಯಲ್ಲಿ ಹಾಸ್ಟೆಲ್ ಆವರಣದೊಳಗೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ದಾಳಿ ನಡೆಸಲಾಯಿತು ಎಂದು ಖುಹೇಹಮಿ ಹೇಳಿದರು.
ಸ್ಥಳೀಯ ವ್ಯಕ್ತಿಗಳು ಮತ್ತು ಇತರ ವಿದ್ಯಾರ್ಥಿಗಳು ಮಧ್ಯರಾತ್ರಿ ಹಾಸ್ಟೆಲ್‌ಗೆ ಬಲವಂತವಾಗಿ ನುಗ್ಗಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಕಾಶ್ಮೀರಿ ವಿದ್ಯಾರ್ಥಿಗಳು ಹೇಳಿದ್ದಾರೆ. ಅವರ ಬಟ್ಟೆಗಳನ್ನು ಹರಿದು ಹಾಕಲಾಗಿದೆ, ಮತ್ತು ಕನಿಷ್ಠ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಖುಹೇಹಾಮಿ ಹೇಳಿದರು.
ಖುಹೇಹಾಮಿ ಪ್ರಕಾರ, ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರಿ ವಿದ್ಯಾರ್ಥಿಗಳು ಹಲ್ಲೆಗೊಳಗಾದ 7ನೇ ಘಟನೆ ಇದು. ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರಿ ವಿದ್ಯಾರ್ಥಿಯನ್ನು ಕ್ರೂರವಾಗಿ ಥಳಿಸಲಾಯಿತು ಎಂದು ಅವರು ಹೇಳಿದರು. ಮತ್ತೊಂದು ಘಟನೆಯಲ್ಲಿ, ಹಿಂದೂ ರಕ್ಷಾ ದಳ ಮತ್ತು ಇತರ ಅಂಶಗಳು ಡೆಹ್ರಾಡೂನ್‌ನ ಹಲವಾರು ಕಾಲೇಜುಗಳಿಗೆ ಲಿಖಿತ ಬೆದರಿಕೆಗಳನ್ನು ನೀಡಿದ್ದು, ನಿಗದಿತ ಗಡುವಿನೊಳಗೆ ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳನ್ನು ಹೊರಹಾಕುವಂತೆ ಒತ್ತಾಯಿಸಿವೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಹಿಂದೂ ರಕ್ಷಾ ದಳದ ಕಾರ್ಯಕರ್ತರು ಉತ್ತರಾಖಂಡದಲ್ಲಿ ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳನ್ನು ಗುರುತಿಸಿ ದೈಹಿಕವಾಗಿ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿರುವುದು ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



