ದೇಶ

'ಆದಷ್ಟು ಬೇಗ ಭಾರತಕ್ಕೆ ಹಿಂತಿರುಗಿ': ಪಾಕ್‌ನಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ 'ಕಟ್ಟುನಿಟ್ಟಿನ ನಿರ್ದೇಶನ'!

ಪಾಕಿಸ್ತಾನಕ್ಕೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ (MEA) ಪ್ರಯಾಣ ಸಲಹೆಯನ್ನು ನೀಡಿದೆ. ಅಲ್ಲದೆ ಸಾಧ್ಯವಾದಷ್ಟು ಬೇಗ ಪಾಕಿಸ್ತಾನದಲ್ಲಿರುವ ಭಾರತೀಯರು ಸ್ವದೇಶಕ್ಕೆ ಮರಳುವಂತೆ ಸೂಚನೆ ನೀಡಿದೆ.

'ಆದಷ್ಟು ಬೇಗ ಭಾರತಕ್ಕೆ ಹಿಂತಿರುಗಿ': ಪಾಕ್‌ನಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ 'ಕಟ್ಟುನಿಟ್ಟಿನ ನಿರ್ದೇಶನ'!
Published On :

ನವದೆಹಲಿ: ಪಾಕಿಸ್ತಾನಕ್ಕೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ (MEA) ಪ್ರಯಾಣ ಸಲಹೆಯನ್ನು ನೀಡಿದೆ. ಅಲ್ಲದೆ ಸಾಧ್ಯವಾದಷ್ಟು ಬೇಗ ಪಾಕಿಸ್ತಾನದಲ್ಲಿರುವ ಭಾರತೀಯರು ಸ್ವದೇಶಕ್ಕೆ ಮರಳುವಂತೆ ಸೂಚನೆ ನೀಡಿದೆ.

ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸೂಚಿಸಿದೆ. ಪ್ರಸ್ತುತ ಪಾಕಿಸ್ತಾನದಲ್ಲಿರುವ ಭಾರತೀಯ ಪ್ರಜೆಗಳು ಸಹ ಸಾಧ್ಯವಾದಷ್ಟು ಬೇಗ ಭಾರತಕ್ಕೆ ಮರಳಲು ಸೂಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ತಿಳಿಸಿದೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಇದರಲ್ಲಿ ಹೆಚ್ಚಾಗಿ ಪ್ರವಾಸಿಗರು ಸೇರಿದ್ದಾರೆ.

ವಿದೇಶಾಂಗ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾಗುವ ವೈದ್ಯಕೀಯ ವೀಸಾವು 2025ರ ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರುತ್ತದೆ ಎಂದು ತಿಳಿಸಿದೆ. ಏಪ್ರಿಲ್ 24ರಂದು ಹೊರಡಿಸಲಾದ ಸೂಚನೆಯಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆ ಕುರಿತ ಸಂಪುಟ ಸಮಿತಿ ತೆಗೆದುಕೊಂಡ ನಿರ್ಧಾರಗಳ ಮುಂದುವರಿಕೆಯಾಗಿ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ಎಲ್ಲಾ ಅಸ್ತಿತ್ವದಲ್ಲಿರುವ ಮಾನ್ಯ ವೀಸಾಗಳನ್ನು 2025ರ ಏಪ್ರಿಲ್ 27ರಿಂದ ರದ್ದುಗೊಳಿಸಲಾಗುತ್ತದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು 2025ರ ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರುತ್ತವೆ. ಪರಿಷ್ಕೃತ ವೀಸಾ ಅವಧಿ ಮುಗಿಯುವ ಮೊದಲು ಭಾರತದಲ್ಲಿ ಪ್ರಸ್ತುತ ಇರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆಯಬೇಕು. ಭಾರತೀಯ ನಾಗರಿಕರು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸಲು ಬಲವಾಗಿ ಸೂಚಿಸಲಾಗಿದೆ. ಪ್ರಸ್ತುತ ಪಾಕಿಸ್ತಾನದಲ್ಲಿರುವ ಭಾರತೀಯ ಪ್ರಜೆಗಳು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಮರಳಲು ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.