Pahalgam Terror Attack: 'ಹಂದಿಗಳು, ಪಾಕಿಸ್ತಾನಿಯರಿಗೆ ಪ್ರವೇಶವಿಲ್ಲ'; Food Street ಪೋಸ್ಟರ್ ವೈರಲ್
ಉತ್ತರ ಪ್ರದೇಶದ ಇಂದೋರ್ ನಲ್ಲಿ ಪ್ರಖ್ಯಾತ ಫುಡ್ ಸ್ಟ್ರೀಟ್ ನಲ್ಲಿ ಪಾಕಿಸ್ತಾನಿಯರು ಮತ್ತು ಹಂದಿಗಳಿಗೆ ಪ್ರವೇಶವಿಲ್ಲ ಎಂಬ ಪೋಸ್ಟರ್ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇಂದೋರ್: 26 ಮಂದಿ ಹಿಂದೂಗಳ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಪಾಕಿಸ್ತಾನಿಯರ ವಿರುದ್ಧದ ಪೋಸ್ಟರ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ಆಕ್ರೋಶ ಪ್ರತಿಭಟನೆ ಭುಗಿಲೆದ್ದಿದೆ. ಜನ ಬೀದಿಗಿಳಿದು ಪಾಕಿಸ್ತಾನಿ ಪ್ರಾಯೋಜಿತ ಉಗ್ರ ದಾಳಿಯನ್ನು ಒಕ್ಕೊರಲಿನಿಂದ ಖಂಡಿಸುತ್ತಿದ್ದಾರೆ.
ಏತನ್ಮಧ್ಯೆ ಉತ್ತರ ಪ್ರದೇಶದ ಇಂದೋರ್ ನಲ್ಲಿ ಪ್ರಖ್ಯಾತ ಫುಡ್ ಸ್ಟ್ರೀಟ್ ನಲ್ಲಿ ಪಾಕಿಸ್ತಾನಿಯರು ಮತ್ತು ಹಂದಿಗಳಿಗೆ ಪ್ರವೇಶವಿಲ್ಲ ಎಂಬ ಪೋಸ್ಟರ್ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.
ಇಂದೋರ್ ನ ಐಕಾನಿಕ್ ಛಪ್ಪನ್ ತುಕಾನ್ ಫುಡ್ ಸ್ಟ್ರೀಟ್ ರಸ್ತೆಯಲ್ಲಿರುವ ಆಹಾರ ಮಳಿಗೆಯ ಮೇಲೆ ಪಾಕಿಸ್ತಾನವನ್ನು ಗುರಿಯಾಗಿಟ್ಟುಕೊಂಡು ಹಾಕಲಾದ ಪೋಸ್ಟರ್ ಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಈ ಅಂಗಡಿಯಲ್ಲಿ ಹಂದಿಗಳು ಮತ್ತು ಪಾಕಿಸ್ತಾನಿ ನಾಗರಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಒಂದು ದೊಡ್ಡ ಫಲಕದಲ್ಲಿ ಬರೆಯಲಾಗಿದೆ. ಪಾಕಿಸ್ತಾನಿ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹಂದಿಯ ಮುಖ ಹೊಂದಿರುವ ವಿರೂಪಗೊಂಡ ಚಿತ್ರವನ್ನೂ ಪೋಸ್ಟರ್ ಮಾಡಲಾಗಿದೆ. ಈ ಪೋಸ್ಟರ್ ಶರವೇಗದಲ್ಲಿ ವೈರಲ್ ಆಗಿ, ಅನೇಕರನ್ನು ಆಹಾರ ಮಳಿಗೆಯತ್ತ ಆಕರ್ಷಿಸುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ ಏಪ್ರಿಲ್ 22, 2025 ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಪ್ರಾತಿನಿಧಿಕ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ಟಿಆರ್ ಎಫ್ ಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲವಿದ್ದು, ಟಿಆರ್‌ಎಫ್ ಅನ್ನು 26/11 ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಎಲ್‌ಇಟಿ ಸಂಘಟನೆಯ ಅಂಗಸಂಸ್ಥೆ ಎಂದು ಪರಿಗಣಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



