ಜಮ್ಮು-ಕಾಶ್ಮೀರ: LOC ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಸೇನೆಯಿಂದ ದಿಟ್ಟ ಉತ್ತರ; ಕುಲ್ಗಮ್'ನಲ್ಲಿ ಉಗ್ರರ ಇಬ್ಬರು ಸಹಚರರ ಬಂಧನ
ಏಪ್ರಿಲ್ 25-26ರ ರಾತ್ರಿ, ಕಾಶ್ಮೀರದ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ಧಕ್ಕೂ ಪಾಕಿಸ್ತಾನಿ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಶ್ರೀನಗರ ಮೂಲದ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವೆಡೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಏಪ್ರಿಲ್ 25-26ರ ರಾತ್ರಿ, ಕಾಶ್ಮೀರದ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ಧಕ್ಕೂ ಪಾಕಿಸ್ತಾನಿ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಶ್ರೀನಗರ ಮೂಲದ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಎರಡು ರಾತ್ರಿ ನಿರಂತರವಾಗಿ ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿರುವುದು ಎರಡನೇ ಬಾರಿಯಾಗಿದೆ. ಸೇನಾ ಪಡೆಗಳು ದಾಳಿಗೆ ದಿಟ್ಟ ಉತ್ತರ ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ವೇಳೆ ದಾಳಿಯಲ್ಲಿ "ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದೂ ತಿಳಿಸಿದ್ದಾರೆ.
ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಭಾರತೀಯ ಸೇನೆಯ ಸಿದ್ಧತೆ ಹಾಗೂ ಜಾಗರೂಕತೆಯನ್ನು ಪರಿಶೀಲಿಸಬಹುದು ಎಂದು ಈ ಹಿಂದೆ ಸೇನಾ ಮೂಲಗಳು ಮಾಹಿತಿ ನೀಡಿತ್ತು. ಇದರಂತೆಯೇ ಗಡಿಯಲ್ಲಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎನ್ನಲಾಗಿದೆ.
ಬಂಡೀಪೋರಾದಲ್ಲಿ ಉಗ್ರರ ಸಹಚರರ ಬಂಧನ
ಈ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಘಟನೆಯಲ್ಲಿ ಮೂವರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವನನ್ನು ಬಂಧಕ್ಕೊಳಪಡಿಸಿದ್ದಾರೆ. ಗುಂಡಿನ ಚಕಮಕಿಯ ಸಮಯದಲ್ಲಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದರಂತೆ ಕುಲ್ಗಮ್ ಜಿಲ್ಲೆಯ ಖೈಮೋಹ್ ಪ್ರದೇಶದ ಥೋಕರ್‌ಪೋರಾದಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ.
ಪಾಕಿಸ್ತಾನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಭಾರತ ಸರಕಾರ ಇಂಡಸ್ ಜಲ ಒಪ್ಪಂದವನ್ನು ಅಮಾನತುಪಡಿಸಿದೆ. ಅಟಾರಿ ಗಡಿಯಲ್ಲಿರುವ ಚೆಕ್ ಪೋಸ್ಟ್ ಮುಚ್ಚಲು ಮತ್ತು ಹೈಕಮಿಷನ್‌ಗಳ ಒಟ್ಟಾರೆ ಬಲವನ್ನು ಕಡಿತಗೊಳಿಸಲು ನಿರ್ಧರಿಸಿದೆ.
ಅಧಿಕೃತ ದಾಖಲೆಗಳೊಂದಿಗೆ ಈ ಗಡಿಮಾರ್ಗವಾಗಿ ಭಾರತ ಪ್ರವೇಶಿಸಿದವರು 2025ರ ಮೇ 1ರೊಳಗೆ ವಾಪಸ್ ಹೋಗುವಂತೆ ಸೂಚಿಸಿದೆ. ಎಸ್ಪಿಇಎಸ್ ವೀಸಾದಡಿ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳು 48 ತಾಸುಗಳೊಳಗೆ ಭಾರತ ತೊರೆಯಬೇಕು ಎಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



