ಕಾನ್ಪುರ: ಪಾರ್ಕ್ ಗೆ ಪಹಲ್ಗಾಮ್ ದಾಳಿಗೆ ಬಲಿಯಾದ ಶುಭಂ ದ್ವಿವೇದಿ ಹೆಸರು ನಾಮಕರಣ!
31 ವರ್ಷದ ದ್ವಿವೇದಿ ಈ ವರ್ಷ ಫೆಬ್ರವರಿ 12 ರಂದು ವಿವಾಹವಾಗಿದ್ದರು ಮತ್ತು ಪತ್ನಿ ಎದುರೇ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದರು.

ಕಾನ್ಪುರ: ಇತ್ತೀಚಿಗೆ ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾದ ಶುಭಂ ದ್ವಿವೇದಿ ಅವರ ಹೆಸರನ್ನು ಕಾನ್ಫುರದ ಪಾರ್ಕ್ ವೊಂದಕ್ಕೆ ಇಡಲಾಗುತ್ತಿದೆ.
ಶ್ಯಾಮ್ ನಗರದಲ್ಲಿರುವ ಪಾರ್ಕ್ ಮತ್ತು ವೃತ್ತವೊಂದಕ್ಕೆ ಪಶುಭಂ ದ್ವಿವೇದಿ ಅವರ ಹೆಸರನ್ನು ಇಡಲಾಗುವುದು ಎಂದು ನಗರ ಮೇಯರ್ ಪ್ರಮೀಳಾ ಪಾಂಡೆ ಶನಿವಾರ ತಿಳಿಸಿದ್ದಾರೆ.
31 ವರ್ಷದ ದ್ವಿವೇದಿ ಈ ವರ್ಷ ಫೆಬ್ರವರಿ 12 ರಂದು ವಿವಾಹವಾಗಿದ್ದರು ಮತ್ತು ಪತ್ನಿ ಎದುರೇ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದರು.
ಕಾನ್ಪುರ ಮುನ್ಸಿಪಲ್ ಕಾರ್ಪೊರೇಷನ್ ನ (ಕೆಎಂಸಿ) ಶ್ಯಾಮ್ ನಗರದಲ್ಲಿರುವ ಉದ್ಯಾನವನ ಮತ್ತು ವೃತ್ತವೊಂದಕ್ಕೆ ಭಯೋತ್ಪಾದಕರ ಗುಂಡಿಗೆ ಬಲಿಯಾದ ಶುಭಂ ದ್ವಿವೇದಿ ಅವರ ಹೆಸರನ್ನು ಇಡಲು ನಾವು ನಿರ್ಧರಿಸಿದ್ದೇವೆ ಎಂದು ಪಾಂಡೆ ಹೇಳಿದರು.
ಶುಭಂ ದ್ವಿವೇದಿ ಅವರ ಪತ್ನಿ ಅಶನ್ಯಾ ಅವರು ಆಸಕ್ತಿ ವ್ಯಕ್ತಪಡಿಸಿದರೆ ಕಾನ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಹೊರಗುತ್ತಿಗೆ ಕೆಲಸವನ್ನು ನೀಡಬಹುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಇದಕ್ಕೂ ಮುನ್ನಾ ಬಿಜೆಪಿ ಕೌನ್ಸಿಲರ್‌ಗಳು ಮತ್ತು ಕಾರ್ಯಕರ್ತರೊಂದಿಗೆ Rally ನಡೆಸಿದ ಮೇಯರ್, ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರತಿಭಟನಾಕಾರರು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅದರ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಅವರ ಪ್ರತಿಕೃತಿಯನ್ನು ದಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



