ಮುಂಬೈ: ಅಂಧೇರಿ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ' ಮಹಿಳೆ ಸಾವು, 6 ಮಂದಿ ಉಸಿರುಗಟ್ಟಿ ಆಸ್ಪತ್ರೆಗೆ ದಾಖಲು
ಲೋಖಂಡ್‌ವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿರುವ ಎಂಟು ಅಂತಸ್ತಿನ ಬ್ರೋಕ್ ಲ್ಯಾಂಡ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ನಸುಕಿನ ಜಾವ 2.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಮುಂಬೈ: ಮುಂಬೈನ ಅಂಧೇರಿಯಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 34 ವರ್ಷದ ಮಹಿಳೆ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ತೊಂದರೆ ಅನುಭವಿಸಿದ ಘಟನೆ ನಡೆದಿದೆ.
ಲೋಖಂಡ್‌ವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿರುವ ಎಂಟು ಅಂತಸ್ತಿನ ಬ್ರೋಕ್ ಲ್ಯಾಂಡ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ನಸುಕಿನ ಜಾವ 2.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ನಿವಾಸಿಗಳಲ್ಲಿ ಒಬ್ಬರಾದ ಅಭಿನಾ ಸಂಜನ್‌ವಾಲಾ ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ. ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
10 ದಿನಗಳ ಶಿಶು ಮತ್ತು ಮೂರು ವರ್ಷದ ಮಗು ಸೇರಿದಂತೆ ಇತರ ಬಾಧಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಮಗುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಇಬ್ಬರು ಪುರುಷರನ್ನು ಕೂಪರ್ ಮತ್ತು ಟ್ರಾಮಾ ಕೇರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


