ದೇಶ

ಪಹಲ್ಗಾಮ್ ದಾಳಿ ಹಿನ್ನೆಲೆ: ದೇಶದ್ರೋಹದ ಹೇಳಿಕೆ, ಅಸ್ಸಾಂನಲ್ಲಿ 16 ಮಂದಿ ಬಂಧನ

ಬಂಧಿತರಲ್ಲಿ ವಿರೋಧ ಪಕ್ಷ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಕೂಡ ಸೇರಿದ್ದಾರೆ. ಅಗತ್ಯವಿದ್ದರೆ, ಬಂಧಿತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು.

ಪಹಲ್ಗಾಮ್ ದಾಳಿ ಹಿನ್ನೆಲೆ: ದೇಶದ್ರೋಹದ ಹೇಳಿಕೆ, ಅಸ್ಸಾಂನಲ್ಲಿ 16 ಮಂದಿ ಬಂಧನ
ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
Published On :

ಗುವಾಹಟಿ: ಪಹಲ್ಗಾಮ್ ದಾಳಿಯ ಹಿನ್ನಲೆಯಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಸ್ಸಾಂನಾದ್ಯಂತ ಕನಿಷ್ಠ 16 ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ದೇಶಕ್ಕೆ ಕೇಡು ಬಯಸಿದ 16 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರಲ್ಲಿ ವಿರೋಧ ಪಕ್ಷ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಕೂಡ ಸೇರಿದ್ದಾರೆ. ಅಗತ್ಯವಿದ್ದರೆ, ಬಂಧಿತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು ಎಂದು ಶರ್ಮಾ ಹೇಳಿದ್ದಾರೆ

ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಸಾಮ್ಯತೆ ಇಲ್ಲ, ಎರಡು ದೇಶಗಳು ಶತ್ರು ರಾಷ್ಟ್ರಗಳು ಮತ್ತು ನಾವು ಹಾಗೆಯೇ ಉಳಿಯಬೇಕು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಂಗಳವಾರ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿ ತಾಣವಾದ ಬೈಸರನ್‌ನಲ್ಲಿ ಭಯೋತ್ಪಾದಕರು ದಾಳಿ ಮಾಡಿದ ನಂತರ ಕನಿಷ್ಠ 26ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.