ದೇಶ

CM Siddaramaiah ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿದ್ದಾರೆ: ಮಾಜಿ ಸಿಎಂ Jagadish Shettar

ಸಾರ್ವಜನಿಕವಾಗಿ ಮಾನಸಿಕ ಸ್ತಿಮಿತ ಕಳೆದಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಕೈ ಎತ್ತುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದು ಬೆಳಗಾವಿ ಸಂಸದರೂ ಆಗಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

CM Siddaramaiah ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿದ್ದಾರೆ: ಮಾಜಿ ಸಿಎಂ Jagadish Shettar
ಜಗದೀಶ್ ಶೆಟ್ಟರ್
Published On :

ದೆಹಲಿ: ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಎಸ್ ಪಿ ಮೇಲೆ ಕೈ ಎತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಸಾರ್ವಜನಿಕವಾಗಿ ಮಾನಸಿಕ ಸ್ತಿಮಿತ ಕಳೆದುಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಕೈ ಎತ್ತುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದು ಬೆಳಗಾವಿ ಸಂಸದರೂ ಆಗಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದರಲ್ಲಿ ತಪ್ಪೇನಿದೆ? ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ. ಪ್ರತಿಭಟನೆಯನ್ನು ಸಿಎಂ ಸಿದ್ದರಾಮಯ್ಯ ಸ್ಥಿತಪ್ರಜ್ಞರಾಗಿ ಸ್ವೀಕರಿಸಬೇಕಿತ್ತು, ಅದು ಬಿಟ್ಟು ಒಬ್ಬ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಕಪಾಳ ಮೋಕ್ಷ ಮಾಡಲು ಮುಂದಾಗಿದ್ದು ಸಿಎಂ ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.