Pahalgam Attack: ಉಗ್ರರ ಸ್ಲೀಪರ್ ಸೆಲ್ ಮತ್ತೆ ಆ್ಯಕ್ಟಿವ್; ಮತ್ತಷ್ಟು ದಾಳಿ ಸಾಧ್ಯತೆ, ಕಾಶ್ಮೀರದ 48 ಪ್ರವಾಸಿ ತಾಣಗಳು ಬಂದ್!
ಪಹಲ್ಗಾಮ್ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿದ್ದು, ಮತ್ತಷ್ಟು ದಾಳಿಗೆ ಸಂಚು ರೂಪಿಸಿವೆ.

ಶ್ರೀನಗರ: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬೆನ್ನಲ್ಲೇ ಉಗ್ರರಿಗಾಗಿ ಭಾರತೀಯ ಸೇನಾಪಡೆ ತೀವ್ರ ಶೋಧ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಮತ್ತಷ್ಟು ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ದಳಗಳು ಎಚ್ಚರಿಕೆ ನೀಡಿವೆ.
ಗುಪ್ತಚರ ದಳಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಪಹಲ್ಗಾಮ್ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿದ್ದು, ಮತ್ತಷ್ಟು ದಾಳಿಗೆ ಸಂಚು ರೂಪಿಸಿವೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸುವಂತೆ ಗುಪ್ತಚರ ದಳಗಳು ಮಾಹಿತಿ ನೀಡಿವೆ ಎಂದು ವರದಿಗಳು ತಿಳಿಸಿವೆ.
ಮೂಲಗಳ ಪ್ರಕಾರ, ಭಯೋತ್ಪಾದಕ ಸಂಘಟನೆಗಳು ಮುಂಬರುವ ದಿನಗಳಲ್ಲಿ ಭದ್ರತಾ ಪಡೆ ಮತ್ತು ಸ್ಥಳೀಯರಲ್ಲದ ನಿವಾಸಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ತಿಳಿದುಬಂದಿದೆ.
ಸ್ಥಳೀಯೇತರ ಜನರು, ಸಿಐಡಿ ಅಧಿಕಾರಿಗಳು, ಕಾಶ್ಮೀರಿ ಪಂಡಿತರು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಐಎಸ್ ಐ ಸಂಚು ರೂಪಿಸಿರುವುದಾಗಿ ಗುಪ್ತಚರ ದಳ ಮುನ್ನೆಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



