ಹೊಸ EV ನೀತಿಗೆ ಮಹಾರಾಷ್ಟ್ರ ಸಚಿವ ಸಂಪುಟ ಅಸ್ತು; ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ, ಟೋಲ್ ವಿನಾಯಿತಿ
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಕೆಲವು ಎಲೆಕ್ಟ್ರಿಕ್ ವಾಹನಗಳಿಗೆ ಟೋಲ್ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಂಗಳವಾರ ಹೊಸ ಎಲೆಕ್ಟ್ರಿಕ್ ವಾಹನ(EV) ನೀತಿಗೆ ಅನುಮೋದನೆ ನೀಡಿದ್ದು, ಇದರಲ್ಲಿ ಪ್ರಯಾಣಿಕ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುವುದು ಎಂದು ಹೇಳಿದೆ.
ಇಂದು ತಮ್ಮ ನೇತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಕೆಲವು ಎಲೆಕ್ಟ್ರಿಕ್ ವಾಹನಗಳಿಗೆ ಟೋಲ್ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
"ರಾಜ್ಯದಲ್ಲಿ ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಅಡಿಯಲ್ಲಿ ಪ್ರಯಾಣಿಕರ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಸಿಎಂ ಹೇಳಿದರು.
ಹೊಸ ನೀತಿಯಡಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯವನ್ನು ಬಲಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



