ಮುಂಬೈ: ಶೋ ರೂಂ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ, ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ
ಎರಡು ದಿನಗಳಲ್ಲಿ ಮಹಾನಗರದಲ್ಲಿ 2 ಅಗ್ನಿ ಅವಘಡಗಳು ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ.

ಮುಂಬೈ: ವಾಣಿಜ್ಯ ನಗರಿ ಮುಂಬೈನ ಬಾಂದ್ರಾದಲ್ಲಿನ ಎಲೆಕ್ಟ್ರಾನಿಕ್ಸ್ ಸರಕುಗಳ ಶೋ ರೂಂ ಕಟ್ಟಡದಲ್ಲಿ ಮಂಗಳವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಎರಡು ದಿನಗಳಲ್ಲಿ ಮಹಾನಗರದಲ್ಲಿ 2 ಅಗ್ನಿ ಅವಘಡಗಳು ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ.
ಭಾನುವಾರ, ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯ (ED) ಕಚೇರಿ ಇರುವ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.
ಇಂದು ಬಾಂದ್ರಾ ಪಶ್ಚಿಮ ಪ್ರದೇಶದ ಲಿಂಕಿಂಗ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಗ್ನಿ ಅವಘಡ ಸುದ್ದಿ ತಿಳಿಯುತ್ತಿದ್ದಂತೆಯೇ ಹನ್ನೆರಡು ಅಗ್ನಿಶಾಮಕ ವಾಹನಗಳು ಮತ್ತು ಇತರ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿದ್ದು, ಬೆಂಕಿಯನ್ನು ನಂದಿಸುತ್ತಿವೆ.
ಅಗ್ನಿಶಾಮಕ ದಳವು ಬೆಳಿಗ್ಗೆ 4:49 ರ ಸುಮಾರಿಗೆ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು IIIನೇ ಹಂತಕ್ಕೆ ಏರಿಸಿದ್ದು, ಕಾರ್ಯಾಚರಣೆಗೆ ಇತರೆ ಸಂಸ್ಥೆಗಳನ್ನೂ ಕೂಡ ಸಜ್ಜುಗೊಳಿಸಿದೆ ಎಂದು ತಿಳಿದುಬಂದಿದೆ. ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



