ಭಾರತದಲ್ಲಿ ಪಾಕ್ ರಕ್ಷಣಾ ಸಚಿವರ 'X' ಖಾತೆ ನಿರ್ಬಂಧ
ಕಳೆದ ವಾರ, ಪಾಕಿಸ್ತಾನದ ರಕ್ಷಣಾ ಸಚಿವರು ವೈರಲ್ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ ಪಾಕಿಸ್ತಾನ ಉಗ್ರ ಸಂಘಟನೆಗಳಿಗೆ ಬೆಂಬಲ ಮತ್ತು ಹಣಕಾಸು ನೆರವು ನೀಡುತ್ತಿದೆ ಎಂದು ಹೇಳುವ ಮೂಲಕ ತಪ್ಪೊಪ್ಪಿಕೊಂಡಿದ್ದರು.

ನವದೆಹಲಿ: 26 ಪ್ರವಾಸಿಗರನ್ನು ಬಲಿ ಪಡೆದ ಪಹಲ್ಗಾಮ್ ಉಗ್ರ ದಾಳಿಯ ಕೆಲವು ದಿನಗಳ ನಂತರ, ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ X ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ, ಅದರ ಸೇನೆ ಮತ್ತು ಭದ್ರತಾ ಸಂಸ್ಥೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ ಹಾಗೂ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಸೋಮವಾರ ಕೇಂದ್ರ ಸರ್ಕಾರ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಇಂದು ಪಾಕ್ ರಕ್ಷಣಾ ಸಚಿವರ X ಖಾತೆಯನ್ನು ನಿರ್ಬಂಧಿಸಲಾಗಿದೆ.
ಕಳೆದ ವಾರ, ಪಾಕಿಸ್ತಾನದ ರಕ್ಷಣಾ ಸಚಿವರು ವೈರಲ್ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ ಪಾಕಿಸ್ತಾನ ಉಗ್ರ ಸಂಘಟನೆಗಳಿಗೆ ಬೆಂಬಲ ಮತ್ತು ಹಣಕಾಸು ನೆರವು ನೀಡುತ್ತಿದೆ ಎಂದು ಹೇಳುವ ಮೂಲಕ ತಪ್ಪೊಪ್ಪಿಕೊಂಡಿದ್ದರು.
ಈಗ ವೈರಲ್ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವರು ಸ್ಕೈ ನ್ಯೂಸ್‌ನ ಯಾಲ್ಡಾ ಹಕೀಮ್ ಅವರೊಂದಿಗೆ ಮಾತನಾಡುತ್ತಿದ್ದಾಗ, ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ಒದಗಿಸುತ್ತಿದೆ ಮತ್ತು ತರಬೇತಿ ನೀಡುವ ದೀರ್ಘ ಇತಿಹಾಸ ಹೊಂದಿದೆ ಎನ್ನುವ ಆರೋಪದ ಬಗ್ಗೆ ನೀವೇನು ಹೇಳುತ್ತೀರಿ ಎಂದು ಕೇಳಿದ್ದಾರೆ. ಇದಕ್ಕೆ ಖ್ವಾಜಾ, ನಾವು ಕಳೆದ ಮೂರು ದಶಕಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸ ಮಾಡುತ್ತಿದ್ದೇವೆ. ಅದು ತಪ್ಪು. ನಾವು ಅದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



