ಸೆಪ್ಟಂಬರ್ 9 ರಂದು ಉಪ ರಾಷ್ಟ್ರಪತಿ ಚುನಾವಣೆ: ದಿನಾಂಕ ನಿಗದಿ ಮಾಡಿ ಆಯೋಗ ಆದೇಶ
ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ.

ನವದೆಹಲಿ: ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ. ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆಯಲ್ಲಿ ಹೇಳಿದೆ.
ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು.
ಆರೋಗ್ಯದ ಕಾರಣ ನೀಡಿ 22 ರಂದು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ರಾಜೀನಾಮೆ ನೀಡಿದರು. 2022 ರಿಂದ ಈ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 74 ವರ್ಷದ ಅವರು, ರಾಜ್ಯಸಭಾ ಅಧ್ಯಕ್ಷರಾಗಿ ಮಳೆಗಾಲದ ಅಧಿವೇಶನದ ಮೊದಲ ದಿನದ ಅಧ್ಯಕ್ಷತೆ ವಹಿಸಿದ ನಂತರ ಈ ಘೋಷಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



