ದೇಶ

ಮಾನವ ಕಳ್ಳಸಾಗಣೆ, ಮತಾಂತರ ಪ್ರಕರಣ: ಕೇರಳದ ಇಬ್ಬರು ಸನ್ಯಾಸಿನಿಯರಿಗೆ ಛತ್ತೀಸ್‌ಗಢ ಕೋರ್ಟ್ ಜಾಮೀನು

ಸ್ಥಳೀಯ ಬಜರಂಗದಳದ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ ನಂತರ ಜುಲೈ 25 ರಂದು ದುರ್ಗ್ ರೈಲ್ವೆ ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಯಿತು.

ಮಾನವ ಕಳ್ಳಸಾಗಣೆ, ಮತಾಂತರ ಪ್ರಕರಣ: ಕೇರಳದ ಇಬ್ಬರು ಸನ್ಯಾಸಿನಿಯರಿಗೆ ಛತ್ತೀಸ್‌ಗಢ ಕೋರ್ಟ್ ಜಾಮೀನು
ಪ್ರೀತಿ ಮೇರಿ ಮತ್ತು ವಂಜನಾ ಪ್ರಾನ್ಸಿಸ್
Published On :

ಬಿಲಾಸ್ ಪುರ: ಮಾನವ ಕಳ್ಳಸಾಗಣೆ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಕೇರಳದ ಇಬ್ಬರು ಕ್ಯಾಥೊಲಿಕ್ ಸನ್ಯಾಸಿನಿಗಳೂ ಸೇರಿದಂತೆ ಮೂವರಿಗೆ ಛತ್ತೀಸ್‌ಗಢದ ಬಿಲಾಸ್‌ಪುರದ ವಿಶೇಷ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ನೀಡಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್‌ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ ಅವರು ಪ್ರೀತಿ ಮೆರ್ರಿ, ವಂದನಾ ಫ್ರಾನ್ಸಿಸ್ (ಇಬ್ಬರೂ ಕೇರಳದವರು), ಮತ್ತು ಸುಕಮನ್ ಮಾಂಡವಿ ಎಂಬುವರಿಗೆ ಜಾಮೀನು ನೀಡಿದ್ದಾರೆ. ತಮ್ಮ ಪಾಸ್‌ಪೋರ್ಟ್‌ಗಳನ್ನು ಸರೆಂಡರ್ ಮಾಡಿ, ತಲಾ 50,000 ರೂ.ಗಳ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಒದಗಿಸುವಂತೆ ಷರತ್ತು ವಿಧಿಸಿದೆ.

ಸ್ಥಳೀಯ ಬಜರಂಗದಳದ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ ನಂತರ ಜುಲೈ 25 ರಂದು ದುರ್ಗ್ ರೈಲ್ವೆ ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಯಿತು. ಈ ಮೂವರು ಸೇರಿ ನಾರಾಯಣಪುರದ ಮೂರು ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ಅವರನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಅಮೃತೋ ದಾಸ್, ಶುಕ್ರವಾರ ವಿಚಾರಣೆಯ ನಂತರ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ ಎಂದು ಹೇಳಿದರು. ವಿಚಾರಣೆಗಾಗಿ ಪ್ರಾಸಿಕ್ಯೂಷನ್ ಪೊಲೀಸ್ ಕಸ್ಟಡಿಯನ್ನು ಕೋರಿಲ್ಲ, ಸಂತ್ರಸ್ತರನ್ನು ಈಗಾಗಲೇ ಅವರ ಮನೆಗಳಿಗೆ ಕಳುಹಿಸಲಾಗಿದೆ ಎಂದು ಅವರು ದೃಢಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.