ದೇಶ

ರಾಜನಾಗಲು ಬಯಸುವುದಿಲ್ಲ, ಆ ಪರಿಕಲ್ಪನೆಯನ್ನೇ ನಾನು ವಿರೋಧಿಸುತ್ತೇನೆ: ರಾಹುಲ್ ಗಾಂಧಿ

'ಸಾಂವಿಧಾನಿಕ ಸವಾಲುಗಳು: ದೃಷ್ಟಿಕೋನಗಳು ಮತ್ತು ಮಾರ್ಗಗಳು' ಎಂಬ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ರಾಜನಾಗಲು ಬಯಸುವುದಿಲ್ಲ, ಆ ಪರಿಕಲ್ಪನೆಯನ್ನೇ ನಾನು ವಿರೋಧಿಸುತ್ತೇನೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ತಾವು ರಾಜನಾಗಲು ಬಯಸುವುದಿಲ್ಲ ಮತ್ತು ಅದರ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.

'ಸಾಂವಿಧಾನಿಕ ಸವಾಲುಗಳು: ದೃಷ್ಟಿಕೋನಗಳು ಮತ್ತು ಮಾರ್ಗಗಳು' ಎಂಬ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಅವರು ಭಾಷಣ ಆರಂಭಿಸುತ್ತಿದ್ದಂತೆಯೇ ವಿಜ್ಞಾನ ಭವನದ ಸಭಾಂಗಣದಲ್ಲಿದ್ದವರು ‘ಇಸ್ ದೇಶ್ ಕಾ ರಾಜಾ ಕೈಸಾ ಹೋ, ರಾಹುಲ್ ಗಾಂಧಿ ಜೈಸಾ ಹೋ’ ಎಂಬ ಘೋಷಣೆಗಳನ್ನು ಕೂಗಲಾರಂಭಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, 'ಇಲ್ಲ ಬಾಸ್, ಮೈನ್ ರಾಜಾ ನಹೀಂ ಹುಂ. ರಾಜಾ ಬನಾನೇ ಭೀ ನಹಿಂ ಚಾಹತಾ ಹುಂ. ಮೈನ್ ರಾಜಾ ಕೇ ಎಗೆನೆಸ್ಟ್ ಹುಂ, ಕಾನ್ಸೆಪ್ಟ್ ಕೆ ಭೀ ಎಗೆನೆಸ್ಟ್ ಹುಂ (ಇಲ್ಲ ಬಾಸ್, ನಾನು ರಾಜನಲ್ಲ. ನಾನು ರಾಜನಾಗಲು ಬಯಸುವುದಿಲ್ಲ. ನಾನು ರಾಜ ಮತ್ತು ಆ ಪರಿಕಲ್ಪನೆಗೆ ವಿರುದ್ಧವಾಗಿದ್ದೇನೆ)' ಎಂದು ಪ್ರತಿಕ್ರಿಯಿಸಿದರು.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ರಾಜ' ಎಂದು ಟೀಕಿಸಿದ್ದ ರಾಹುಲ್ ಗಾಂಧಿ, ಅವರು ಜನರ ಧ್ವನಿಯನ್ನು ಕೇಳುತ್ತಿಲ್ಲ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.