ತಾಂತ್ರಿಕ ದೋಷ: ಸಿಂಗಾಪುರ- ಚೆನ್ನೈ ಏರ್ ಇಂಡಿಯಾ ವಿಮಾನ ಹಾರಾಟ ರದ್ದು!
ಭಾನುವಾರವೂ ತಾಂತ್ರಿಕ ದೋಷದಿಂದಾಗಿ ಸಿಂಗಾಪುರದಿಂದ ಚೆನ್ನೈಗೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾದ ಕೆಲವು ವಿಮಾನಗಳಲ್ಲಿ ತಾಂತ್ರಿಕ ದೋಷ ಹೆಚ್ಚಾಗಿ ಕಂಡುಬರುತ್ತಿವೆ.
ಭಾನುವಾರವೂ ತಾಂತ್ರಿಕ ದೋಷದಿಂದಾಗಿ ಸಿಂಗಾಪುರದಿಂದ ಚೆನ್ನೈಗೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.
A321 ವಿಮಾನದ ಬದಲಿಗೆ AI 349 ವಿಮಾನ ಚೆನ್ನೈಗೆ ತೆರಳಬೇಕಾಗಿತ್ತು. ಆದರೆ ನಿರ್ವಹಣಾ ಕಾರ್ಯದಿಂದಾಗಿ ಸಿಂಗಾಪುರದಿಂದ ಚೆನ್ನೈಗೆ ಹೊರಡಬೇಕಿದ್ದ AI349 ವಿಮಾನವನ್ನು ರದ್ದುಗೊಳಿಸಲಾಗಿದೆ. ಸರಿಪಡಿಸಲು ಹೆಚ್ಚುವರಿ ಸಮಯ ಬೇಕಾಗುತ್ತದೆ ಎಂದು ಏರ್‌ಲೈನ್ಸ್ ತಿಳಿಸಿದೆ.
"ಪ್ರಯಾಣಿಕರು ಆದಷ್ಟು ಬೇಗ ಚೆನ್ನೈ ತಲುಪಲು ವ್ಯವಸ್ಥೆ ಮಾಡಲಾಗುವುದು. ಹೋಟೆಲ್ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಸಂಪೂರ್ಣ ಮರುಪಾವತಿ ಅಥವಾ ಮರು ವೇಳಾಪಟ್ಟಿಯಲ್ಲಿ ಸಂಚರಿಸುವ ಆಯ್ಕೆಯನ್ನು ಪ್ರಯಾಣಿಕರಿಗೆ ನೀಡಲಾಗುವುದು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ.
ಈ ಅನಿರೀಕ್ಷಿತ ಅಡಚಣೆಯಿಂದಾಗಿ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲತೆ ಕಡಿಮೆ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಏರ್ ಲೈನ್ಸ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



