ದೇಶ

Operation Mahadev: ಮುಂದುವರೆದ ಕಾರ್ಯಾಚರಣೆ, ಓರ್ವ ಉಗ್ರನ ಸದೆಬಡಿದ ಸೇನಾಪಡೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.

Operation Mahadev: ಮುಂದುವರೆದ ಕಾರ್ಯಾಚರಣೆ, ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಸಂಗ್ರಹ ಚಿತ್ರ
Published On :

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರರನ್ನು ಸದೆಬಡಿಯಲು ಭಾರತೀಯ ಸೇನೆ ಆರಂಭಿಸಿರುವ ‘ಆಪರೇಷನ್‌ ಮಹಾದೇವ‘ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಮತ್ತೋರ್ವ ಉಗ್ರನನ್ನು ಸದೆಬಡಿದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.

ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ವಿಶೇಷ ಕಾರ್ಯಾಚರಣೆ (SOG) ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಜುಲೈ 30 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಪ್ರತ್ಯೇಕ ಎನ್‌ಕೌಂಟರ್ ನಡೆಯಿತು.

ಗಡಿ ಬೇಲಿಯ ಬಳಿ ಅನುಮಾನಾಸ್ಪದ ಚಲನೆಯನ್ನು ಪತ್ತೆಹಚ್ಚಲಾಗಿದೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.