ದೇಶ

Shibu Soren: ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕ ಪೋಷಕರಾಗಿರುವ ಶಿಬು ಸೊರೆನ್ 38 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೆ ಜಾರ್ಖಂಡ್‌ನಲ್ಲಿ ಮೂರೂ ಭಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Shibu Soren: ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ
ಶಿಬು ಸೊರೇನ್
Published On :

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ.

ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಜೂನ್ ಕೊನೆಯ ವಾರದಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕ ಪೋಷಕರಾಗಿರುವ ಶಿಬು ಸೊರೆನ್ 38 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೆ ಜಾರ್ಖಂಡ್‌ನಲ್ಲಿ ಮೂರೂ ಭಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

2005 ರಲ್ಲಿ ಮೊದಲ ಬಾರಿಗೆ 10 ದಿನಗಳ ಕಾಲ ಸೇವೆ ಸಲ್ಲಿಸಿದ್ದರೆ ನಂತರ 2008 ರಿಂದ 2009 ರವರೆಗೆ ಎರಡನೇ ಬಾರಿ ಮುಖ್ಯಮಂತ್ರಿಯಾದರೆ, 2009 ರಿಂದ 2010 ರವರೆಗೆ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.