ಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು.

ನವದೆಹಲಿ: ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು. ಬಿ. ಆರ್ ಗವಾಯಿ ಅವರೊಂದಿಗೆ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ನ್ಯಾಯಪೀಠದಲ್ಲಿದ್ದರು.
ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (BNSS) ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸದ ಕಾರಣ ಯತ್ನಾಳ್ ಅವರ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 28, 2024 ರಂದು ರದ್ದುಗೊಳಿಸಿದ್ದು, ಅರ್ಜಿದಾರರು ಹಾಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದಾರೆ ಎಂದು ವಕೀಲರು ಹೇಳಿದರು.
ಅದಕ್ಕೆ ಏನು? ಎಂದು ಪ್ರಶ್ನಿಸಿದ ಸಿಜೆಐ, ರೂ.25,000 ದಂಡದೊಂದಿಗೆ ಅರ್ಜಿಯನ್ನು ವಜಾಗೊಳಿಸಿದರು. ತದನಂತರ ದಂಡವನ್ನು ರೂ.1 ಕೋಟಿಗೆ ಹೆಚ್ಚಿಸಿದರು. ವಕೀಲರ ವಾದದ ಬಳಿಕ ದಂಡವನ್ನು ಮನನ್ನಾ ನ್ಯಾಯಾಲಯ, ಮೇಲ್ಮನವಿ ಹಿಂಪಡೆಯಲು ಅನುಮತಿ ನೀಡಿತು.
2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ರ್‍ಯಾಲಿಯಲ್ಲಿ ಯತ್ನಾಳ್ ನೀಡಿದ ಅವಹೇಳನಕಾರಿ ಹೇಳಿಕೆ ಆರೋಪದಲ್ಲಿ ಪಾಟೀಲ್ ಅವರು ಬಿಎನ್‌ಎಸ್‌ಎಸ್‌ನ ಸೆಕ್ಷನ್ 223 ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಯಾತ್ನಾಳ್ ಹೇಳಿಕೆಯಿಂದ ತಮ್ಮ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಹೇಳಿದ್ದರು. ಆದಾಗ್ಯೂ, ಯತ್ನಾಳ್ ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



