ದೇಶ

ಆಗಸ್ಟ್ 7ಕ್ಕೆ SIR ಬಗ್ಗೆ ಕಾರ್ಯತಂತ್ರ ನಿರ್ಧಾರ: INDIA bloc ನಾಯಕರಿಂದ ಡಿನ್ನರ್ ಮೀಟಿಂಗ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

ಆಗಸ್ಟ್ 7ಕ್ಕೆ SIR ಬಗ್ಗೆ ಕಾರ್ಯತಂತ್ರ ನಿರ್ಧಾರ: INDIA bloc ನಾಯಕರಿಂದ ಡಿನ್ನರ್ ಮೀಟಿಂಗ್
ಬಿಹಾರ SIR ವಿರುದ್ಧ ಸಂಸತ್ತಿನಲ್ಲಿ INDIA ಬ್ಲಾಕ್ ಪ್ರತಿಭಟನೆ
Published On :

ನವದೆಹಲಿ: ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯದ ಬಗ್ಗೆ ಸಂಸತ್ತಿನಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ, ವಿರೋಧ ಪಕ್ಷ ಇಂಡಿಯಾ ಬಣದ ನಾಯಕರು ಆಗಸ್ಟ್ 7ರಂದು ಈ ವಿಷಯದ ಕುರಿತು ಭವಿಷ್ಯದ ಕಾರ್ಯತಂತ್ರವನ್ನು ನಿಶ್ಚಯಿಸಲು ಔತಣಕೂಟ ಸಭೆಯನ್ನು ನಡೆಸಲಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಔತಣಕೂಟ ಸಭೆಯನ್ನು ಆಯೋಜಿಸಲಿದ್ದಾರೆ. ನಾಳೆ ದೆಹಲಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯಿದೆ, ಇದರಲ್ಲಿ ಅವರು 2024 ರ ಲೋಕಸಭಾ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಅಕ್ರಮಗಳ ಕುರಿತು ಚುನಾವಣಾ ಆಯೋಗದ (EC) ವಿರುದ್ಧ ಪುರಾವೆಗಳನ್ನು ಬಹಿರಂಗಪಡಿಸಬಹುದು ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಅಕ್ರಮಗಳನ್ನು ಬಯಲಿಗೆಳೆಯುವುದನ್ನು ಆಣು ಬಾಂಬ್ ಗೆ ಹೋಲಿಸಿದ್ದ ರಾಹುಲ್ ಗಾಂಧಿ, ಅದು ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದರು. ಗುರುವಾರದ ಸಭೆಯಲ್ಲಿ ಕಾಂಗ್ರೆಸ್ ತನ್ನ ತನಿಖೆ ಬಗ್ಗೆ ಇತರ ಮೈತ್ರಿ ಪಕ್ಷಗಳೊಂದಿಗೆ ಚರ್ಚಿಸಬಹುದು.

ಸಭೆಯಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹಾಜರಾತಿಯನ್ನು ದೃಢಪಡಿಸಿದ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, ರಾಹುಲ್ ಗಾಂಧಿ ಅವರು ಸಭೆಗೆ ಉದ್ಧವ್ ಠಾಕ್ರೆ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ ಎಂದು ಹೇಳಿದರು.

ಸೆಪ್ಟೆಂಬರ್ 9 ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಿಗದಿಯಾಗಿರುವುದರಿಂದ, ನಾಯಕರು ಜಂಟಿ ಅಭ್ಯರ್ಥಿಯ ಬಗ್ಗೆಯೂ ಚರ್ಚಿಸಲಿದ್ದಾರೆ. ವಿರೋಧ ಪಕ್ಷಗಳು ಆಗಸ್ಟ್ 8 ರಂದು ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ನಡೆಸಲು ಯೋಜಿಸುತ್ತಿವೆ.

ಟಿಎಂಸಿ ಪಕ್ಷದ ಪುನರ್ರಚನೆ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿನ್ನೆ ಅಭಿಷೇಕ್ ಬ್ಯಾನರ್ಜಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ, ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬದಲಾಯಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಎರಡರಿಂದಲೂ ಎಲ್ಲಾ ಎಐಟಿಸಿ ಸಂಸದರೊಂದಿಗೆ ಇಂದು ವರ್ಚುವಲ್ ಸಭೆಯನ್ನು ಕರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.