ದೇಶ

ಕಲ್ಯಾಣ್ ಬ್ಯಾನರ್ಜಿ ರಾಜೀನಾಮೆ ಅಂಗೀಕಾರ; ಟಿಎಂಸಿಯ ಲೋಕಸಭೆ ಮುಖ್ಯ ಸಚೇತಕರಾಗಿ ಕಾಕೋಲಿ ಘೋಷ್ ನೇಮಕ

ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು, ಕಾಕೋಲಿ ಘೋಷ್ ದಸ್ತಿದಾರ್ ಬದಲಿಗೆ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕಿಯಾಗಿ ಶತಾಬ್ದಿ ರಾಯ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ರಾಜೀನಾಮೆ ಅಂಗೀಕಾರ; ಟಿಎಂಸಿಯ ಲೋಕಸಭೆ ಮುಖ್ಯ ಸಚೇತಕರಾಗಿ ಕಾಕೋಲಿ ಘೋಷ್ ನೇಮಕ
ಕಾಕೋಲಿ ಘೋಷ್ ದಸ್ತಿದಾರ್
Published On :

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಂಗಳವಾರ ಕಲ್ಯಾಣ್ ಬ್ಯಾನರ್ಜಿ ಅವರು ಲೋಕಸಭೆಯ ಮುಖ್ಯ ಸಚೇತಕ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದ್ದು, ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರನ್ನಾಗಿ ನಾಮನಿರ್ದೇಶನ ಮಾಡಿದೆ.

ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು, ಕಾಕೋಲಿ ಘೋಷ್ ದಸ್ತಿದಾರ್ ಬದಲಿಗೆ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕಿಯಾಗಿ ಶತಾಬ್ದಿ ರಾಯ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು X ನಲ್ಲಿ ಪೋಸ್ಟ್‌ ಮಾಡಲಾಗಿದೆ.

"ಕಲ್ಯಾಣ್ ಬ್ಯಾನರ್ಜಿ ಅವರು ಲೋಕಸಭೆಯಲ್ಲಿ ಸಂಸದೀಯ ಪಕ್ಷದ ಮುಖ್ಯ ಸಚೇತಕ ಹುದ್ದೆಗೆ ನಿನ್ನೆ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷರು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಆ ಕೊಡುಗೆಗಳಿಗೆ ಧನ್ಯವಾದ ಅರ್ಪಿಸಿದ್ದಾರೆ" ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

"ಹಿರಿಯ ಸಂಸದರೊಂದಿಗೆ ಸಮಾಲೋಚಿಸಿದ ನಂತರ ಟಿಎಂಸಿ ಅಧ್ಯಕ್ಷರು, ಲೋಕಸಭೆಯಲ್ಲಿ ಪಕ್ಷದ ಹೊಸ ಮುಖ್ಯ ಸಚೇತಕರನ್ನಾಗಿ ಡಾ. ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ಮತ್ತು ಶ್ರೀಮತಿ ಸತಾಬ್ದಿ ರಾಯ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಹೊಸ ಉಪ ನಾಯಕಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿದ್ದಾರೆ" ಎಂದು ಟಿಎಂಸಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.