ಗಂಗಾ ಮಾತೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ, ನೀವು ನೇರವಾಗಿ ಸ್ವರ್ಗಕ್ಕೆ ಹೋಗುವಿರಿ: ಪ್ರವಾಹ ಪೀಡಿತ ಸಂತ್ರಸ್ತರಿಗೆ ಸಚಿವರ ಮಾತು!
ಗಂಗಾ ಮಾತೆ ತನ್ನ ಪುತ್ರರ ಪಾದಗಳನ್ನು ತೊಳೆಯುವುದಕ್ಕಾಗಿ ಬರುತ್ತಾಳೆ. ಆಕೆಯ ದರ್ಶನದಿಂದ ಪುತ್ರರೆಲ್ಲಾ ಸ್ವರ್ಗಕ್ಕೆ ಹೋಗುತ್ತಾರೆ ಎಂದೂ ಸಚಿವ ನಿಶಾದ್ ಹೇಳಿದ್ದಾರೆ

ಲಖನೌ: ಗಂಗಾ ಮಾತೆ ನಿಮ್ಮ ಪಾದ ತೊಳೆಯಲೆಂದೇ ಬಂದಿದ್ದಾಳೆ. ಮಾತೆಯ ದರ್ಶನ ಮಾತ್ರದಿಂದ ನೀವು ನೇರವಾಗಿ ಸ್ವರ್ಗಕ್ಕೆ ಹೋಗುವಿರಿ. ಆದರೆ, ವಿರೋಧ ಪಕ್ಷಗಳ ನಾಯಕರು ನಿಮಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಸಚಿವ ಸಂಜಯ ನಿಶಾದ್ ಅವರು, ಕಾನ್ಪುರ ಗ್ರಾಮಾಂತರ ಜಿಲ್ಲೆಯ ಭೋಗಿನಿಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಹೇಳಿರುವ ಮಾತುಗಳಿವು.
ಪ್ರವಾಹದಿಂದಾಗಿ ನಮ್ಮ ಮನೆಗಳು ನಾಶವಾಗಿವೆ. ಎಲ್ಲಿಗೆ ಹೋಗಬೇಕು ಎಂಬುದು ತಿಳಿಯದೆ ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ದೂರಿದ ಸಂತ್ರಸ್ತರನ್ನು ಉದ್ದೇಶಿಸಿ ಅವರು ಈ ಮಾತು ಹೇಳಿದ್ದಾರೆ.
ಗಂಗಾ ಮಾತೆ ತನ್ನ ಪುತ್ರರ ಪಾದಗಳನ್ನು ತೊಳೆಯುವುದಕ್ಕಾಗಿ ಬರುತ್ತಾಳೆ. ಆಕೆಯ ದರ್ಶನದಿಂದ ಪುತ್ರರೆಲ್ಲಾ ಸ್ವರ್ಗಕ್ಕೆ ಹೋಗುತ್ತಾರೆ ಎಂದೂ ಸಚಿವ ನಿಶಾದ್ ಹೇಳಿದ್ದಾರೆ. ಸಚಿವರ ಈ ಮಾತುಗಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಇದೇ ವೇಳೆ ಅಲ್ಲಿದ್ದ ಮಹಿಳೆ ನೀವು ಇಲ್ಲಿಯೇ ಇದ್ದು ಆಶೀರ್ವಾದ ಪಡೆಯಿರಿ ಎಂದಿದ್ದಾರೆ. ಸಂಜಯ ಅವರು ನಿಶಾದ್ ಪಕ್ಷದ ಅಧ್ಯಕ್ಷ. ಈ ಪಕ್ಷ ಆಡಳಿತಾರೂಢ ಬಿಜೆಪಿಯ ಮಿತ್ರಪಕ್ಷವೂ ಆಗಿದೆ. ನಂತರ ಅವರು ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


