ದೇಶ

ಒಡಿಶಾ: ಬುಡಕಟ್ಟು ಬಾಲಕಿ ಮೇಲೆ 1 ತಿಂಗಳಿಗೂ ಹೆಚ್ಚು ಕಾಲ ಅತ್ಯಾಚಾರ

ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಬುಧವಾರ ಸಂತ್ರಸ್ತೆಯ ಭಾವ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಒಡಿಶಾ: ಬುಡಕಟ್ಟು ಬಾಲಕಿ ಮೇಲೆ 1 ತಿಂಗಳಿಗೂ ಹೆಚ್ಚು ಕಾಲ ಅತ್ಯಾಚಾರ
ಸಾಂದರ್ಭಿಕ ಚಿತ್ರ
Published On :

ಮಯೂರ್ಭಂಜ್: ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ 11 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಒಂದು ತಿಂಗಳಿಗೂ ಹೆಚ್ಚು ಕಾಲ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಜೂನ್ 14 ಮತ್ತು ಜುಲೈ 27 ರ ನಡುವೆ ಅಪ್ರಾಪ್ತ ಬಾಲಕಿಯ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಆಗಸ್ಟ್ 3 ರಂದು ಖುಂಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಬುಧವಾರ ಸಂತ್ರಸ್ತೆಯ ಭಾವ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಅಪ್ರಾಪ್ತ ವಯಸ್ಕ ಆರೋಪಿಯನ್ನು ರೂರ್ಕೆಲಾದ ಮಕ್ಕಳ ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದ್ದರೆ, ಉಳಿದ ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

"ಆಸ್ಪತ್ರೆಯಲ್ಲಿ ಬಾಲಕಿ ಮತ್ತು ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹುಡುಗಿಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ" ಎಂದು ಖುಂಟಾ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್ ಪಂಚನನ್ ಮೊಹಂತಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಆರೋಪಿಗಳು ಸಂತ್ರಸ್ತೆಯನ್ನು ಬೇರೆ ಬೇರೆ ಸ್ಥಳಗಳಿಗೆ ಕರೆದೊಯ್ದು ಪದೇ, ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.