ದೇಶ

ಜಾರ್ಖಂಡ್‌: ಹಳಿತಪ್ಪಿದ ಎರಡು ಗೂಡ್ಸ್ ರೈಲು, ಸಂಚಾರದಲ್ಲಿ ಭಾರಿ ವ್ಯತ್ಯಯ

ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಜಾರ್ಖಂಡ್‌: ಹಳಿತಪ್ಪಿದ ಎರಡು ಗೂಡ್ಸ್ ರೈಲು, ಸಂಚಾರದಲ್ಲಿ ಭಾರಿ ವ್ಯತ್ಯಯ
ಸಾಂದರ್ಭಿಕ ಚಿತ್ರ
Published On :

ಸೆರೈಕೆಲಾ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯ ಚಾಂಡಿಲ್ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ಎರಡು ಗೂಡ್ಸ್ ರೈಲುಗಳ 20ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿದ್ದು, ಆಗ್ನೇಯ ರೈಲ್ವೆಯ ಚಾಂಡಿಲ್-ಟಾಟಾನಗರ ವಿಭಾಗದ ನಡುವಿನ ರೈಲು ಸೇವೆಯ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ರೈಲು ಹಳಿತಪ್ಪಿದ ಪರಿಣಾಮ ಚಾಂಡಿಲ್‌ನಿಂದ ಹೊರಡುವ ಮತ್ತು ಆಗಮಿಸುವ ರೈಲು ಸೇವೆಗಳಲ್ಲಿ ವ್ಯತ್ಯಯವಾಗಿದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ(ಆದ್ರಾ ವಿಭಾಗ) ವಿಕಾಶ್ ಕುಮಾರ್ ಅವರು ತಿಳಿಸಿದ್ದಾರೆ.

ಹಳಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್, ಟಾಟಾ-ಕತಿಹಾರ್ ಎಕ್ಸ್‌ಪ್ರೆಸ್, ಟಾಟಾ-ಆರಾ ಎಕ್ಸ್‌ಪ್ರೆಸ್ ರೈಲು ರದ್ದಾಗಿವೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.