K ಫಾರ್ ಕಾಬಾ, M ಫಾರ್ ಮಸೀದಿ: ಹಿಂದಿ ವರ್ಣಮಾಲೆಯಲ್ಲಿ ಮಕ್ಕಳಿಗೆ ಬೋಧನೆ; ಪ್ರಾಂಶುಪಾಲರ ವಿರುದ್ಧ ತನಿಖೆಗೆ ಆದೇಶ
ಮಧ್ಯಪ್ರದೇಶದಲ್ಲಿ ಇಸ್ಲಾಂ ಧರ್ಮದ ಪದಗಳ ಉಲ್ಲೇಖವಿರುವ ಹಿಂದಿ ವರ್ಣಮಾಲೆ ಚಾರ್ಟ್ ಅನ್ನು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿವಾದ ಭುಗಿಲೆದ್ದಿದ್ದು, ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.

ಮಧ್ಯಪ್ರದೇಶದಲ್ಲಿ ಇಸ್ಲಾಂ ಧರ್ಮದ ಪದಗಳ ಉಲ್ಲೇಖವಿರುವ ಹಿಂದಿ ವರ್ಣಮಾಲೆ ಚಾರ್ಟ್ ಅನ್ನು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿವಾದ ಭುಗಿಲೆದ್ದಿದ್ದು, ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.
ಮಧ್ಯಪ್ರದೇಶದ ರೈಸನ್ ಜಿಲ್ಲೆಯ ಕಾನ್ವೆಂಟ್ ಶಾಲೆಯ ಪ್ರಾಂಶುಪಾಲ ಐಎ ಖುರೇಷಿ ವಿದ್ಯಾರ್ಥಿಗಳಿಗೆ ಹಿಂದಿ ವರ್ಣಮಾಲೆಯ ಚಾರ್ಟ್‌ಗಳನ್ನು ನೀಡಿದ್ದಾರೆ. ಚಾರ್ಟ್ ನಲ್ಲಿ 'ಕ' ಎಂದರೆ 'ಕಾಬಾ', 'ಎಂ' ಎಂದರೆ 'ಮಸೀದಿ' ಮತ್ತು 'ಎನ್' ಎಂದರೆ 'ನಮಾಜ್' ಎಂದ ಪದಗಳನ್ನು ಬಳಸಲಾಗಿದೆ. ಈ ಘಟನೆ ಬಯಲಿಗೆ ಬರುತ್ತಿದ್ದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿ ಖುರೇಷಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಉದ್ವಗ್ನಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಪ್ರತಿಭಾ ಶರ್ಮಾ ಅವರು ಎಂದು ಹೇಳಿದರು. ಆರೋಪಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಡಿಇಒ ಡಿಡಿ ರಜಕ್ ಹೇಳಿದರು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ, ಒಂದು ನಿರ್ದಿಷ್ಟ ಧರ್ಮದ ಧಾರ್ಮಿಕ ಚಿಹ್ನೆಗಳನ್ನು ಹೊಂದಿರುವ ಅಧ್ಯಯನ ಸಾಮಗ್ರಿಗಳನ್ನು ಶಾಲೆಗಳಲ್ಲಿ ಕಲಿಸಲಾಗುವುದಿಲ್ಲ ಎಂದು ಅವರು ಹೇಳಿದರು.
ಪ್ರಾಂಶುಪಾಲ ಖುರೇಷಿ ತಮ್ಮ ಅಜಾಗರೂಕ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಉರ್ದು-ಹಿಂದಿ ಮಿಶ್ರಿತ ಕೋಷ್ಟಕಗಳನ್ನು ಹೊಂದಿರುವ ಒಂದು ಅಥವಾ ಎರಡು ಪುಸ್ತಕಗಳು ವಿದ್ಯಾರ್ಥಿಗಳನ್ನು ತಲುಪಿವೆ ಎಂದು ಹೇಳಿದರು. ವರ್ಣಮಾಲೆಯ ಚಾರ್ಟ್‌ಗಳನ್ನು ಭೋಪಾಲ್‌ನಿಂದ ಆರ್ಡರ್ ಮಾಡಲಾಗಿತ್ತು. ಮಾರಾಟಗಾರರ ತಪ್ಪಿನಿಂದಾಗಿ, ಮದರಸಾಗಳಲ್ಲಿ ಸಾಮಾನ್ಯವಾಗಿ ಬಳಸುವ ಮೂರು ಅಥವಾ ನಾಲ್ಕು ವಸ್ತುಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



