ದೇಶ

ಮುಂಬೈ: 15 ವರ್ಷದ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ

ಕಲಾಚೌಕಿ ಪ್ರದೇಶದಲ್ಲಿ ನಡೆದ ಈ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ 25 ವರ್ಷದ ಯುವಕನನ್ನು ಮತ್ತು ನಾಲ್ವರು ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: 15 ವರ್ಷದ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ
ಸಾಂದರ್ಭಿಕ ಚಿತ್ರ
Published On :

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನ ಮಧ್ಯ ಭಾಗದಲ್ಲಿ 15 ವರ್ಷದ ಶಾಲಾ ಬಾಲಕಿಯ ಮೇಲೆ ಐವರು ಕಾಮುಕರು ಮೂರು ತಿಂಗಳ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕಲಾಚೌಕಿ ಪ್ರದೇಶದಲ್ಲಿ ನಡೆದ ಈ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ 25 ವರ್ಷದ ಯುವಕನನ್ನು ಮತ್ತು ನಾಲ್ವರು ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯೊಬ್ಬನ ಗೆಳತಿ ಬಾಲಕಿ ಮನೆಗೆ ಬಂದು ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಆಕೆಯನ್ನು ಪ್ರಶ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.

ನಂತರ ಶಾಲಾ ಬಾಲಕಿಯ ಪೋಷಕರು ಆಕೆಯ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ ಆರೋಪಿಯೊಂದಿಗೆ ಆಕೆ ದೈಹಿಕ ಸಂಬಂಧ ಹೊಂದಿದ ಬಗ್ಗೆ ಕೆಲವು ವಿಡಿಯೋಗಳು ಮತ್ತು ಸಂದೇಶಗಳು ಪತ್ತೆಯಾಗಿವೆ. ಬಳಿಕ ಪೋಷಕರು ಪೊಲೀಸರನ್ನು ಸಂಪರ್ಕಿಸಿ, ದೂರು ನೀಡಿದ್ದಾರೆ.

ಬಾಲಕಿಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ, ಐದು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.