ದೇಶ

ರಾಜಸ್ಥಾನ: ಕಂಟೇನರ್-ಪಿಕಪ್​ ಟ್ರಕ್​ ಮಧ್ಯೆ ಭೀಕರ ಅಪಘಾತ; 7 ಮಕ್ಕಳು ಸೇರಿ 11 ಮಂದಿ ಸಾವು

ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತರು ಮನೆಗೆ ಹಿಂತಿರುಗುತ್ತಿದ್ದಾಗ ಬೆಳಗಿನ ಜಾವ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ರಾಜಸ್ಥಾನ: ಕಂಟೇನರ್-ಪಿಕಪ್​ ಟ್ರಕ್​ ಮಧ್ಯೆ ಭೀಕರ ಅಪಘಾತ; 7 ಮಕ್ಕಳು ಸೇರಿ 11 ಮಂದಿ ಸಾವು
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು
Published On :

ಜೈಪುರ: ನಿಂತಿದ್ದ ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಹಾಗೂ 4ಮಹಿಳೆಯರು ಸೇರಿ ಒಟ್ಟು 11 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಬಾಪಿ ಬಳಿ ಸಂಭವಿಸಿದೆ. ಗಾಯಗೊಂಡ 9 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತರು ಮನೆಗೆ ಹಿಂತಿರುಗುತ್ತಿದ್ದಾಗ ಬೆಳಗಿನ ಜಾವ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅವರಲ್ಲಿ ಹೆಚ್ಚಿನವರು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯವರು ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಎಸ್ಪಿ ಸಾಗರ್ ರಾಣಾ ಮಾತನಾಡಿ, ಖಾತು ಶ್ಯಾಮ್ ದೇವಸ್ಥಾನದಿಂದ ಭಕ್ತರು ಬರುವಾಗ ಅಪಘಾತ ಸಂಭವಿಸಿದೆ ನಿಂತಿದ್ದ ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಬಂದಿದ್ದು, ಇಲ್ಲಿಯವರೆಗೆ 11 ಜನರು ಸಾವನ್ನಪ್ಪಿದ್ದಾರೆ.

ಹೆದ್ದಾರಿಯ ಸರ್ವಿಸ್ ಲೇನ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಾಗ ಇಪ್ಪತ್ತು ಜನರು ಅದರಲ್ಲಿದ್ದರು, ಗಾಯಗೊಂಡ ಎಂಟು ಜನರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.