ಬಿಹಾರದಲ್ಲಿ 'ಮತಗಳ್ಳತನ'ಕ್ಕೆ ಬಿಜೆಪಿಯೊಂದಿಗೆ ಚುನಾವಣಾ ಆಯೋಗ 'ಒಪ್ಪಂದ': ತೇಜಸ್ವಿ ಯಾದವ್ ಆರೋಪ
ಬಿಜೆಪಿ ನಾಯಕರು ಎರಡೆರಡು ಮತದಾರರ ಚೀಟಿ ಪಡೆಯಲು ಚುನಾವಣಾ ಆಯೋಗ ನೆರವಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ

ಪಾಟ್ನಾ: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತಗಳನ್ನು ಕದಿಯಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ‘ಒಪ್ಪಂದ’ಮಾಡಿಕೊಂಡಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ಆರೋಪಿಸಿದ್ದಾರೆ.
ಬಿಜೆಪಿ ನಾಯಕರು ಎರಡೆರಡು ಮತದಾರರ ಚೀಟಿ ಪಡೆಯಲು ಚುನಾವಣಾ ಆಯೋಗ ನೆರವಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತಗಳ್ಳತನಕ್ಕೆ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಕೈಜೋಡಿಸುತ್ತಿರುವುದು ಸತ್ಯ. ವಿಶೇಷ ತೀವ್ರ ಪರಿಷ್ಕರಣೆಯ (SIR) ಆರಂಭಿಕ ಕಸರತ್ತಿನ ಬಳಿಕ ಚುನಾವಣಾ ಆಯೋಗ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯನ್ನು 'ಮತಗಳ ಡಕಾಯಿತಿ' ಎಂದು ಕರೆಯಬೇಕು ಎಂದರು.
ರಾಜ್ಯ ಬಿಜೆಪಿ ಮುಖಂಡರು ಎರಡೆರಡು ಮತದಾರರ ಚೀಟಿ ಹೊಂದಲು ಚುನಾವಣಾ ಆಯೋಗ ನೆರವಾಗುತ್ತಿದೆ ಎಂದು ಆರೋಪಿಸಿದರು.
ಕರಡು ಮತದಾರರ ಪಟ್ಟಿಯ ಪ್ರಕಾರ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಯಾಗಿರುವ ಮುಜಾಫರ್‌ಪುರ ಮೇಯರ್ ನಿರ್ಮಲಾ ದೇವಿ ಅವರು ವಿಧಾನಸಭಾ ಕ್ಷೇತ್ರವೊಂದರ ಎರಡು ಬೇರೆ ಬೇರೆ ಬೂತ್‌ಗಳಲ್ಲಿ ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ.
ಅಚ್ಚರಿಯ ವಿಷಯವೇನೆಂದರೆ ಅವರ ಕುಟುಂಬದ ಸದಸ್ಯರು ಕೂಡಾ ಇದೇ ವಿಧಾನಸಭಾ ಕ್ಷೇತ್ರದ ಎರಡು ಬೇರೆ ಬೇರೆ ಬೂತ್ ಗಳಲ್ಲಿ ಎರಡೆರಡು ವೋಟರ್ ಐಡಿ ಹೊಂದಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದರು. ಇಂತಹ ಅಕ್ರಮ ಹೇಗೆ ನಡೆಯಿತು? ಇದಕ್ಕೆ ಯಾರು ಹೊಣೆಗಾರರಾಗಬೇಕು ಎಂದು ಅವರು ಪ್ರಶ್ನಿಸಿದರು.

ಬಿಹಾರ SIR: ಮತದಾರರನ್ನು ಸೇರಿಸಲು ಅಥವಾ ತೆಗೆದುಹಾಕಲು ಯಾವುದೇ ಪಕ್ಷಗಳಿಂದ ಬೇಡಿಕೆ ಬಂದಿಲ್ಲ- ಚುನಾವಣಾ ಆಯೋಗ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


