ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.

ಮೊಹ್ಲಾ: ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆ ಮೇಲೆ ಮದನ್‌ವಾಡ ಪ್ರದೇಶದ ಕಾಡಿನಲ್ಲಿ ನಕ್ಸಲರು ಗುಂಡು ಹಾರಿಸಿದ್ದಾರೆ. ನಂತರ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್ ಕೌಂಟರ್ ಬಳಿಕ ಇಬ್ಬರು ನಕ್ಸಲರ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



