ದೇಶ

Vice-President Polls: ಡಿಎಂಕೆ ರಾಜ್ಯಸಭಾ ಸಂಸದ ತಿರುಚಿ ಶಿವ ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆ ಸಾಧ್ಯತೆ

ಎನ್ ಡಿಎ ಅಭ್ಯರ್ಥಿ ತಮಿಳುನಾಡು ಮೂಲದವರಾಗಿದ್ದು, ಇಂಡಿ ಮೈತ್ರಿಕೂಟವೂ ತಮಿಳುನಾಡಿನ ಸಂಸದನೋರ್ವನನ್ನು ಕಣಕ್ಕೆ ಇಳಿಸುವ ತಯಾರಿ ನಡೆಸಿದೆ.

Vice-President Polls: ಡಿಎಂಕೆ ರಾಜ್ಯಸಭಾ ಸಂಸದ ತಿರುಚಿ ಶಿವ ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆ ಸಾಧ್ಯತೆ
ರಾಜ್ಯಸಭಾ ಸಂಸದ ತಿರುಚಿ ಶಿವ — online desk
Published On :

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಅಧಿಕೃತ ಅಭ್ಯರ್ಥಿ ಘೋಷಣೆ ಮಾಡಿದ ಬೆನ್ನಲ್ಲೇ ವಿಪಕ್ಷಗಳು ಅಭ್ಯರ್ಥಿಯ ಆಯ್ಕೆಗೆ ತಯಾರಿ ನಡೆಸುತ್ತಿವೆ.

ಎನ್ ಡಿಎ ಅಭ್ಯರ್ಥಿ ತಮಿಳುನಾಡು ಮೂಲದವರಾಗಿದ್ದು, ಇಂಡಿ ಮೈತ್ರಿಕೂಟವೂ ತಮಿಳುನಾಡಿನ ಸಂಸದನೋರ್ವನನ್ನು ಕಣಕ್ಕೆ ಇಳಿಸುವ ತಯಾರಿ ನಡೆಸಿದೆ.

ಪ್ರಾದೇಶಿಕ ರಾಜಕೀಯದಿಂದ ಎದುರಾಗುವ ಪ್ರಮುಖ ಅಡಚಣೆಯನ್ನು ನಿವಾರಿಸುವ ಕಾರ್ಯತಂತ್ರದ ನಡೆಯಾಗಿ ವಿರೋಧ ಪಕ್ಷದ ಮೈತ್ರಿಕೂಟ ಡಿಎಂಕೆಯ ರಾಜ್ಯಸಭಾ ಸಂಸದ ತಿರುಚಿ ಶಿವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿರೋಧ ಪಕ್ಷಗಳು ಇಂದು ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ತಮ್ಮ ಅಭ್ಯರ್ಥಿಯನ್ನು ನಿರ್ಧರಿಸಲು ಸಭೆ ಸೇರಿದ ನಂತರವೇ ಅಧಿಕೃತ ಅಭ್ಯರ್ಥಿಯನ್ನು ಘೋಶಿಸಲಾಗುತ್ತದೆ.

ತಮಿಳುನಾಡಿನಲ್ಲಿ ಬಿಜೆಪಿಯ ಅತಿ ಎತ್ತರದ ನಾಯಕರಲ್ಲಿ ಒಬ್ಬರಾದ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 9 ರ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಎಂದು ಕೇಂದ್ರ ಆಡಳಿತ ಪಕ್ಷ ನಿನ್ನೆ ಸಂಜೆ ಘೋಷಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.