ದೇಶ

ಮತದಾರರ ಪಟ್ಟಿ ಸ್ವಚ್ಛವಾಗಿದೆ ಎಂದು EC ಮೊದಲು ಅಫಿಡವಿಟ್ ಸಲ್ಲಿಸಲಿ, ನಂತರ ನಾವು ಸಲ್ಲಿಸುತ್ತೇವೆ: ಕಾಂಗ್ರೆಸ್

ಸಿಇಸಿ, ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಹಿ ಮಾಡಿದ ಅಫಿಡವಿಟ್ ಸಲ್ಲಿಸುವಂತೆ ಏಳು ದಿನಗಳ ಗಡುವು ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ಈ ಹೇಳಿಕೆ ನೀಡಿದೆ.

ಮತದಾರರ ಪಟ್ಟಿ ಸ್ವಚ್ಛವಾಗಿದೆ ಎಂದು EC ಮೊದಲು ಅಫಿಡವಿಟ್ ಸಲ್ಲಿಸಲಿ, ನಂತರ ನಾವು ಸಲ್ಲಿಸುತ್ತೇವೆ: ಕಾಂಗ್ರೆಸ್
ಕನ್ಹಯ್ಯ ಕುಮಾರ್
Published On :

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ(ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಮೊದಲು ಚುನಾವಣಾ ಆಯೋಗವು ತನ್ನ ಮತದಾರರ ಪಟ್ಟಿ ಸ್ವಚ್ಛವಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲಿ. ನಂತರ ನಾವು ಅಸ್ತಿತ್ವದಲ್ಲಿರುವ ಪಟ್ಟಿಯಲ್ಲಿ ಅಕ್ರಮಗಳಿವೆ ಎಂದು ಅಫಿಡವಿಟ್ ಸಲ್ಲಿಸುತ್ತೇವೆ ಎಂದು ಹೇಳಿದೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು, ಜ್ಞಾನೇಶ್ ಕುಮಾರ್ "ಬಿಜೆಪಿ ವಕ್ತಾರ"ರಂತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಇಸಿ, ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಹಿ ಮಾಡಿದ ಅಫಿಡವಿಟ್ ಸಲ್ಲಿಸುವಂತೆ ಏಳು ದಿನಗಳ ಗಡುವು ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ಈ ಹೇಳಿಕೆ ನೀಡಿದೆ. ಇಲ್ಲದಿದ್ದರೆ ಅವರ ಆರೋಪಗಳು ಆಧಾರರಹಿತ ಮತ್ತು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಸಿಇಸಿ ಹೇಳಿದೆ.

ಮತದಾರರ ಅಧಿಕಾರ ಯಾತ್ರೆಯ ಸಂದರ್ಭದಲ್ಲಿ ಪಕ್ಷದ ನಾಯಕ ಕನ್ಹಯ್ಯ ಕುಮಾರ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, "ಈ ಯಾತ್ರೆ ಪ್ರಾರಂಭವಾಗುತ್ತಿದ್ದಂತೆ, ಜ್ಞಾನೇಶ್ ಕುಮಾರ್ ಪತ್ರಿಕಾಗೋಷ್ಠಿ ಮಾಡಬೇಕಾಯಿತು. ಮುಖ್ಯ ಚುನಾವಣಾ ಆಯುಕ್ತರು ಇದ್ದಾರೆ ಎಂದು ನಮಗೆ ತಿಳಿದುಬಂದಿತು" ಎಂದರು.

"ಮೊದಲು, ಅನುರಾಗ್ ಠಾಕೂರ್, ಸಂಬಿತ್ ಪಾತ್ರ ಅಥವಾ ಇತರ ವ್ಯಕ್ತಿಯೊಬ್ಬರು ಕಾಮೆಂಟ್‌ಗಳನ್ನು ಮಾಡುತ್ತಾರೆ ಎಂದು ನಾವು ಭಾವಿಸುತ್ತಿದ್ದೆವು. ಆದರೆ ಅಂತಿಮವಾಗಿ ನಾವು ಸಿಇಸಿಯನ್ನು ನೋಡಿದ್ದೇವೆ" ಎಂದು ಖೇರಾ ಹೇಳಿದ್ದಾರೆ.

ಬಿಜೆಪಿ "ವೋಟ್ ಚೋರಿ" ಮಾಡಲು ಮತ್ತು "ಸಂವಿಧಾನವನ್ನು ಕದಿಯಲು" ಬಯಸುತ್ತದೆ ಎಂದು ಕನ್ಹಯ್ಯಾ ಕುಮಾರ್ ಆರೋಪಿಸಿದರು.

ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ, ಸಮೀಕ್ಷೆಗಳು ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತದೆ ಎಂದು ಸೂಚಿಸಿದ್ದವು. ಆದರೆ ಇದಕ್ಕೆ ವಿರುದ್ಧವಾಗಿ ಫಲಿತಾಂಶ ಬಂದಿತು ಎಂದು ಕನ್ಹಯ್ಯಾ ಕುಮಾರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.