ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ: ತೇಜಸ್ವಿ ಯಾದವ್
ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ.

ನವಾಡ: 'ಹಳೆಯ ಮತ್ತು ಹಳಸಿದ' ಎನ್‌ಡಿಎ ಸರ್ಕಾರವನ್ನು ತೆಗೆದುಹಾಕಲು ಹಾಗೂ ಮುಂದಿನ ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಯುವಕರು ಸಂಕಲ್ಪ ಮಾಡಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮಂಗಳವಾರ ಪ್ರತಿಪಾದಿಸಿದ್ದಾರೆ.
ಕಾಂಗ್ರೆಸ್‌ನ 'ಮತದಾರ ಅಧಿಕಾರ ಯಾತ್ರೆ'ಯ ಮೂರನೇ ದಿನವಾದ ಇಂದು ನವಾಡದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯಾದವ್, ಯುವ ಪೀಳಿಗೆಗೆ ರಾಜ್ಯವನ್ನು ಮುನ್ನಡೆಸಲು ಅವಕಾಶ ಸಿಗುವ ಸಮಯ ಬಂದಿದೆ ಎಂದರು.
"ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ. ಯುವಕರಿಗೆ ಈಗ ಅವಕಾಶ ಸಿಗಬೇಕು. ಬಿಹಾರದ ಬಗ್ಗೆ ನಮಗೆ ಒಂದು ದೃಷ್ಟಿಕೋನವಿದೆ ಎಂದು ಆರ್ ಜೆಡಿ ನಾಯಕ ಹೇಳಿದರು.
ಈ ಹಳೆಯ ಮತ್ತು ಹಳಸಿದ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕಲು ಮತ್ತು ಮುಂದಿನ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಯುವಕರು ಸಂಕಲ್ಪ ಮಾಡಿದ್ದಾರೆ" ಎಂದು ಅವರು ಹೇಳಿದರು.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಒಂದು ಯೋಜನೆ ಎಂದು ಯಾದವ್ ಪುನರುಚ್ಚರಿಸಿದರು.
"SIR ಬಿಹಾರದಲ್ಲಿ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆಡಳಿತ ಪಕ್ಷದ ಪಿತೂರಿ ಎಂದು ಅವರು ಯಾದವ್ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



