ದೇಶ

ಉತ್ತರ ಪ್ರದೇಶ: ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವಿಸಿದ ಯುವಕನ ಮೇಲೆ ಹಲ್ಲೆ! Video

ಆರಂಭದಲ್ಲಿ ಡಾಬಾದಲ್ಲಿ ಕೇಸರಿ ಬಟ್ಟೆ ಧರಿಸಿ ಚಿಕ್ಕನ್ ತಿನ್ನುತ್ತಿದ್ದ ಯುವಕನೊಂದಿಗೆ ವಾಗ್ವಾದ ನಡೆಸಿದ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಉತ್ತರ ಪ್ರದೇಶ: ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವಿಸಿದ ಯುವಕನ ಮೇಲೆ ಹಲ್ಲೆ! Video
ಇಬ್ಬರು ವ್ಯಕ್ತಿಗಳ ನಡುವಿನ ಮಾತಿನ ಚಕಮಕಿ ಚಿತ್ರ
Published On :

ಲಖನೌ: ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಲಖನೌದ ಗೋಸೈಗಂಜ್ ಪ್ರದೇಶದಲ್ಲಿರುವ ಡಾಬಾವೊಂದರಲ್ಲಿ ಭಾನುವಾರ ರಾತ್ರಿ 10:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ಡಾಬಾದಲ್ಲಿ ಕೇಸರಿ ಬಟ್ಟೆ ಧರಿಸಿ ಚಿಕ್ಕನ್ ತಿನ್ನುತ್ತಿದ್ದ ಯುವಕನೊಂದಿಗೆ ವಾಗ್ವಾದ ನಡೆಸಿದ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಬಳಿಕ ಹಲ್ಲೆಗೊಳಗಾದ ಯುವಕ ಕೂಡಾ ತನ್ನ ಸಹಚರರೊಂದಿಗೆ ಸೇರಿಕೊಂಡು ಹಲ್ಲೆ ಮಾಡಿದವನಿಗೆ ಥಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾನೆ. ಈ ಗಲಾಟೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಲಖನೌ ಪೊಲೀಸರು ಘಟನೆಯ ಕುರಿತು ತನಿಖೆಯನ್ನು ಆರಂಭಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಒಬ್ಬ ಯುವಕನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.