ದೆಹಲಿ: ದರಿಯಾಗಂಜ್ ನಲ್ಲಿ ಕಟ್ಟಡ ಕುಸಿದು ಮೂವರು ಸಾವು
ಅವಶೇಷಗಳಿಂದ ಮೂವರನ್ನು ರಕ್ಷಿಸಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವದೆಹಲಿ: ಕೇಂದ್ರ ದೆಹಲಿಯ ದರಿಯಾಗಂಜ್‌ನ ಸದ್ಭಾವನಾ ಪಾರ್ಕ್ ಬಳಿ ಬುಧವಾರ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಇಂದು ಮಧ್ಯಾಹ್ನ 12.14 ಕ್ಕೆ ಮಾಹಿತಿ ಬಂದಿದ್ದು, ಮೂರು ಮಹಡಿಗಳ ಕಟ್ಟಡ ಕುಸಿದು ಬಿದ್ದಿದ್ದು, ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವಶೇಷಗಳಿಂದ ಮೂವರನ್ನು ರಕ್ಷಿಸಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



