'ಮದುವೆ ಮಾತುಕತೆ' ನಡೆಯುತ್ತಿದೆ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದು ನಿಜನಾ? video
ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗುವಂತೆ ಸಲಹೆ ನೀಡಿದ್ದರು.

ಅರಾರಿಯಾ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (55) ತಮ್ಮ ಮದುವೆ ಕುರಿತು ಮಾತನಾಡಿದ್ದಾರೆ.
ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗುವಂತೆ ಸಲಹೆ ನೀಡಿದ್ದರು. ಅವರ ಸಲಹೆ ಬಗ್ಗೆ ತಮ್ಮ ರಾಜಕೀಯ ಮಿತ್ರರು ಮತ್ತು ಕುಟುಂಬದ ಸ್ನೇಹಿತರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಜೋಕ್ ಮಾಡಿದ್ದಾರೆ.
ಮತದಾರರ ಅಧಿಕಾರ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಇತ್ತೀಚಿಗೆ ಆರ್ ಜೆಡಿ ಅನ್ನು ತೀವ್ರವಾಗಿ ಟೀಕಿಸಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೇಜಸ್ವಿ, ಚಿರಾಗ್ ಮೊದಲು ಮದುವೆ ಆಗುವುದನ್ನು ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಆಗ ತೇಜಸ್ವಿ ಅವರಿಂದ ಮೈಕ್ ಕಸಿದುಕೊಂಡ ರಾಹುಲ್, ಇದೇ ರೀತಿಯ ಸಲಹೆಯನ್ನು ಎರಡು ವರ್ಷಗಳ ಹಿಂದೆ ತೇಜಸ್ವಿ ಅವರ ತಂದೆ ನನಗೆ ನೀಡಿದ್ದರು ಎಂದು ಹಾಸ್ಯ ಚಟಾಕಿ ಹಾರಿಸಿದರು.

ರಾಹುಲ್ ಗಾಂಧಿಗೆ ಅನಿರೀಕ್ಷಿತ ಚುಂಬನ; ಕಪಾಳಮೋಕ್ಷ: ಬಿಹಾರದ ಮತದಾರರ ಹಕ್ಕುಗಳ ಯಾತ್ರೆ ವೇಳೆ ಭದ್ರತಾ ವೈಫಲ್ಯ; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


