ದೇಶ

ಮಹಿಳೆಗೆ ಲೈಂಗಿಕ ಕಿರುಕುಳ: ಕೇರಳ Congress ಶಾಸಕ ರಾಹುಲ್ ಮಮ್ ಕೂಟತಿಲ್ ಅಮಾನತು

ಮಹಿಳೆಯರಿಂದ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ ಕೂಟತಿಲ್ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದ್ದು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ: ಕೇರಳ Congress ಶಾಸಕ ರಾಹುಲ್ ಮಮ್ ಕೂಟತಿಲ್ ಅಮಾನತು
ರಾಹುಲ್ ಮಮ್ ಕೂಟತಿಲ್
Published On :

ತಿರುವನಂತಪುರಂ: ಮಹಿಳೆಯರಿಂದ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ ಕೂಟತಿಲ್ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದ್ದು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆರು ತಿಂಗಳ ಕಾಲ ಅಮಾನತು ಮಾಡಲಾಗಿದ್ದು ಆದಾಗ್ಯೂ, ಪಕ್ಷವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಿಲ್ಲ.

ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಹುಲ್ ಮಮ್ ಕೂಟತಿಲ್ ಅವರು ಶಾಸಕ ಹುದ್ದೆಯನ್ನು ತ್ಯಜಿಸುವ ಬಗ್ಗೆ ಚರ್ಚೆಗಳ ನಡುವೆ ಪಕ್ಷದ ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುಂದೆ, ರಾಹುಲ್ ಮಮ್ ಕೂಟತಿಲ್ ಪಕ್ಷದ ಅಥವಾ ಸಂಸದೀಯ ಪಕ್ಷದ ಸಭೆಯಲ್ಲಿ ಸದಸ್ಯರಾಗಿರುವುದಿಲ್ಲ. ಇನ್ನು ತಕ್ಷಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಉಪಚುನಾವಣೆ ನಡೆಯಲಿದೆ ಎಂಬುದು ಪಕ್ಷದ ನಿಲುವು ಎಂದು ಸೂಚಿಸಲಾಗಿದೆ.

ಏತನ್ಮಧ್ಯೆ, ರಾಹುಲ್ ಶಾಸಕರಾಗಿ ಮುಂದುವರಿಯುವುದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸುವುದಾಗಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ವಿ.ಕೆ ಸನೋಜ್ ಹೇಳಿದ್ದಾರೆ. ರಾಹುಲ್ ಮಮ್ ಕೂಟತಿಲ್ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಪಕ್ಷವು ತನಿಖೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹಿರಿಯ ನಾಯಕರು ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.