ದೇಶ

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

ಜಾರ್ಖಂಡ್‌ನ ಗುರುತನ್ನು ಬಲಪಡಿಸಲು ಈ ಕ್ರಮ ಅಗತ್ಯವಾಗಿದೆ ಮತ್ತು ಇದು ರಾಜ್ಯದ ಜನರು ಹೆಮ್ಮೆ ಪಡುವಂತೆ ಮಾಡುತ್ತದೆ ಎಂದಿದ್ದಾರೆ.

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ
ಮನೋಜ್ ಪಾಂಡೆ - ಹೇಮಂತ್ ಸೊರೇನ್
Published On :

ರಾಂಚಿ: 'ದಿಶೋಮ್ ಗುರು' ಶಿಬು ಸೊರೇನ್ ಅವರಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಈಗ ಅವರಿಗೆ 'ರಾಜ್ಯದ ಪಿತಾಮಹ' ಸ್ಥಾನಮಾನ ನೀಡಬೇಕೆಂದು ಒತ್ತಾಯಿಸುತ್ತಿದೆ.

ಈ ಸಂಬಂಧ ಜೆಎಂಎಂ ವಕ್ತಾರ ಮನೋಜ್ ಪಾಂಡೆ ಅವರು ಮಂಗಳವಾರ ಜಾರ್ಖಂಡ್ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಭೇಟಿ ಮಾಡಿ ಅವರಿಗೆ ಮನವಿ ಪತ್ರ ಹಸ್ತಾಂತರಿಸಿದರು.

"ಜೆಎಂಎಂ ಸಂಸ್ಥಾಪಕ, ದಿವಂಗತ ಶಿಬು ಸೊರೇನ್ ಅವರಿಗೆ ಜಾರ್ಖಂಡ್‌ 'ರಾಜ್ಯದ ಪಿತಾಮಹ' ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದೇನೆ" ಎಂದು ಪಾಂಡೆ ಹೇಳಿದ್ದಾರೆ.

"ಮಹಾತ್ಮ ಗಾಂಧಿಯವರಿಗೆ ರಾಷ್ಟ್ರಪಿತ ಸ್ಥಾನಮಾನ ನೀಡಿರುವಂತೆಯೇ, ಜಾರ್ಖಂಡ್ ಚಳುವಳಿ ಮತ್ತು ರಾಜ್ಯ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಶಿಬು ಸೊರೇನ್ ಅವರಿಗೆ 'ರಾಜ್ಯದ ಪಿತಾಮಹ' ಗೌರವ ಸಿಗಬೇಕು" ಎಂದು ಅವರು ಆಗ್ರಹಿಸಿದರು.

ಹೊಸ ಪೀಳಿಗೆ ಅವರ ಕೊಡುಗೆ ಮತ್ತು ಹೋರಾಟದಿಂದ ಸ್ಫೂರ್ತಿ ಪಡೆಯಲು ಸಾಧ್ಯವಾಗುವಂತೆ ಶಿಬು ಸೊರೇನ್ ಅವರ ಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶಿಸಬೇಕೆಂದು ಜೆಎಂಎಂ ವಕ್ತಾರರು ಒತ್ತಾಯಿಸಿದರು.

ಜೆಎಂಎಂ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಾಂಡೆ, ಜಾರ್ಖಂಡ್‌ನ ಗುರುತನ್ನು ಬಲಪಡಿಸಲು ಈ ಕ್ರಮ ಅಗತ್ಯವಾಗಿದೆ ಮತ್ತು ಇದು ರಾಜ್ಯದ ಜನರು ಹೆಮ್ಮೆ ಪಡುವಂತೆ ಮಾಡುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.