ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ.ವಿ ನಾಗರತ್ನ ತೀವ್ರ ಅಸಮಾಧಾನ!
ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ನವದೆಹಲಿ: ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸುವ ಕೊಲಿಜಿಯಂ ಶಿಫಾರಸಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 25 ರಂದು ಸಭೆ ನಡೆಸಿದ ಸಿಜೆಐ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ ಕೆ ಮಹೇಶ್ವರಿ ಮತ್ತು ನಾಗರತ್ನ ಅವರನ್ನೊಳಗೊಂಡ ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಅಕ್ಟೋಬರ್ 2031 ರಲ್ಲಿ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ನಿವೃತ್ತರಾಗಲಿದ್ದಾರೆ. ತದನಂತರ ನ್ಯಾಯಮೂರ್ತಿ ಪಾಂಚೋಲಿ ಅವರು ಮುಖ್ಯ ನ್ಯಾಯಮೂರ್ತಿ ಸ್ಥಾನದ ರೇಸ್ ನಲ್ಲಿರುತ್ತಾರೆ. ವಿವಿಧ ಕಾರಣಗಳಿಂದ ಪಾಂಚೋಲಿ ಅವರ ಹೆಸರನ್ನು ಶಿಫಾರಸು ಮಾಡುವ ಕ್ರಮಕ್ಕೆ ನಾಗರತ್ನ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ನಾಗರತ್ನ ಅವರು ಸುಪ್ರೀಂಕೋರ್ಟ್ ನಲ್ಲಿರುವ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದಾರೆ. ಕಡಿಮೆ ಸೇವಾ ಹಿರಿತನ ಮತ್ತು ಗುಜರಾತ್ ಹೈಕೋರ್ಟ್ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆ ಸುತ್ತಲಿನ ಕಥೆಗಳ ಹೊರತಾಗಿಯೂ ಅವರನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಿರುವುದನ್ನು ನಾಗರತ್ನ ಅವರು ಒತ್ತಿ ಹೇಳಿದ್ದಾರೆ.
ಪಾಂಚೋಲಿ ಅವರು 2023ರ ಜುಲೈನಲ್ಲಿ ಗುಜರಾತ್ ಹೈಕೋರ್ಟ್ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆಯ ಕಾರಣದಿಂದ ನಾಗರತ್ನ ಅವರು ಆಕ್ಷೇಪ ಎತ್ತಿರಬಹುದು ಎಂದು ಮೂಲಗಳು ಹೇಳುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



