ಜಮ್ಮು-ಕಾಶ್ಮೀರ: ಬಂಡಿಪೋರಾದಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ; Video
ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರನ್ನು ಇಂದು ನಸುಕಿನ ಜಾವ ಹತ್ಯೆ ಮಾಡಿವೆ.
ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು -ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ X ನಲ್ಲಿ ತಿಳಿಸಿದೆ.
ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು ಒಳನುಸುಳುವವರನ್ನು ಗಮನಿಸಿದಾಗ ಅವರು ಮನಬಂದಂತೆ ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯೆ ನೀಡಲಾರಂಭಿಸಿದರು. ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿ, ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದವು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



