ದೇಶ

7 ವರ್ಷಗಳ ನಂತರ ಚೀನಾಗೆ ಆಗಮಿಸಿದ ಮೋದಿ; ಟಿಯಾಂಜಿನ್‌ನಲ್ಲಿ ಭಾರತ ಪ್ರಧಾನಿಗೆ ಭವ್ಯ ಸ್ವಾಗತ

ಎರಡು ದಿನಗಳ ಜಪಾನ್ ಭೇಟಿ ಮುಗಿಸಿದ ಪ್ರಧಾನಿ ಮೋದಿ, ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(SCO)ದ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಚೀನಾಗೆ ಆಗಮಿಸಿದ್ದಾರೆ.

7 ವರ್ಷಗಳ ನಂತರ ಚೀನಾಗೆ ಆಗಮಿಸಿದ ಮೋದಿ; ಟಿಯಾಂಜಿನ್‌ನಲ್ಲಿ ಭಾರತ ಪ್ರಧಾನಿಗೆ ಭವ್ಯ ಸ್ವಾಗತ
ಟಿಯಾಂಜಿನ್‌ನಲ್ಲಿ ಭಾರತ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
Published On :

ಟಿಯಾಂಜಿನ್: ಏಳು ವರ್ಷಗಳ ಅಂತರದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೀನಾಕ್ಕೆ ಬಂದಿಳಿದಿದ್ದು, ಟಿಯಾಂಜಿನ್‌ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿ 2018ರಲ್ಲಿ ಕೊನೆಯ ಬಾರಿ ಚೀನಾ ಪ್ರವಾಸ ಕೈಗೊಂಡಿದ್ದರು.

ವಾಷಿಂಗ್ಟನ್‌ನ ಸುಂಕ ನೀತಿಗಳಿಂದ ಉಂಟಾದ ಭಾರತ-ಅಮೆರಿಕ ಸಂಬಂಧಗಳಲ್ಲಿನ ಹಠಾತ್ ಕುಸಿತದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಈ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಎರಡು ದಿನಗಳ ಜಪಾನ್ ಭೇಟಿ ಮುಗಿಸಿದ ಪ್ರಧಾನಿ ಮೋದಿ, ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(SCO)ದ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಚೀನಾಗೆ ಆಗಮಿಸಿದ್ದಾರೆ.

ಆದಾಗ್ಯೂ, ಅಮೆರಿಕದ ಸುಂಕ ಸಂಘರ್ಷ ಪ್ರಪಂಚದಾದ್ಯಂತದ ಬಹುತೇಕ ಎಲ್ಲಾ ಪ್ರಮುಖ ಆರ್ಥಿಕತೆಗಳ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ಭಾನುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಪ್ರಧಾನಿ ಮೋದಿಯ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಮಾತುಕತೆಯಲ್ಲಿ, ಮೋದಿ ಮತ್ತು ಕ್ಸಿ ಭಾರತ-ಚೀನಾ ಆರ್ಥಿಕ ಸಂಬಂಧಗಳನ್ನು ಪರಿಶೀಲಿಸುವ ನಿರೀಕ್ಷೆಯಿದೆ. ಅಲ್ಲದೆ ಪೂರ್ವ ಲಡಾಖ್ ಗಡಿ ವಿವಾದದ ನಂತರ ತೀವ್ರ ಒತ್ತಡಕ್ಕೆ ಸಿಲುಕಿರುವ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಸಾಮಾನ್ಯಗೊಳಿಸುವ ಕ್ರಮಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.