ದೇಶ

ಚಲಿಸುವ ವ್ಯಾನ್‌ನಲ್ಲಿ 6 ಮಂದಿಯಿಂದ ಸಾಮೂಹಿಕ ಅತ್ಯಾಚಾರ: ಯುವತಿಯನ್ನು ಹೆದ್ದಾರಿಯಲ್ಲಿ ಬಿಟ್ಟು ಹೋದ ದುರುಳರು!

ಈ ಘಟನೆ ಶುಕ್ರವಾರ ಸಂಜೆ 6 ರಿಂದ 7 ಗಂಟೆಯ ನಡುವೆ ಉಡಾಲ-ಬಲಸೋರ್ ರಸ್ತೆಯಲ್ಲಿ ನಡೆದಿದೆ. ಸರತ್ ಪ್ರದೇಶದ ಆರೋಪಿಗಳೆಲ್ಲರೂ ಚಲಿಸುವ ವ್ಯಾನ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಚಲಿಸುವ ವ್ಯಾನ್‌ನಲ್ಲಿ 6 ಮಂದಿಯಿಂದ ಸಾಮೂಹಿಕ ಅತ್ಯಾಚಾರ: ಯುವತಿಯನ್ನು ಹೆದ್ದಾರಿಯಲ್ಲಿ ಬಿಟ್ಟು ಹೋದ ದುರುಳರು!
ಸಾಂದರ್ಭಿಕ ಚಿತ್ರ
Published On :

ಒಡಿಶಾ: ಪ್ರಯಾಣಿಕರ ವ್ಯಾನ್‌ನಲ್ಲಿ 21 ವರ್ಷದ ಯುವತಿಯ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಉಡಾಲ ಪೊಲೀಸ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಈ ಘಟನೆ ಶುಕ್ರವಾರ ಸಂಜೆ 6 ರಿಂದ 7 ಗಂಟೆಯ ನಡುವೆ ಉಡಾಲ-ಬಲಸೋರ್ ರಸ್ತೆಯಲ್ಲಿ ನಡೆದಿದೆ. ಸರತ್ ಪ್ರದೇಶದ ಆರೋಪಿಗಳೆಲ್ಲರೂ ಚಲಿಸುವ ವ್ಯಾನ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಸಹಾಯಕ್ಕಾಗಿ ಕಿರುಚಿದಾಗ ಆಕೆಯನ್ನು ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ವರದಿಯಾಗಿದೆ.

ಈ ವರ್ಷದ ಆರಂಭದಲ್ಲಿ ಬಂಗಿರಿಪೋಸಿಯಲ್ಲಿ ನಡೆದ ಮಕರ ಹಬ್ಬದ ಆಚರಣೆಯ ಸಂದರ್ಭದಲ್ಲಿ ಭೇಟಿಯಾದ ಇಬ್ಬರು ಆರೋಪಿಗಳೊಂದಿಗೆ ತನ್ನ ಮಗಳಿಗೆ ಪರಿಚಯವಿತ್ತು. ಇಬ್ಬರೂ ಆಕೆಯ ಫೋನ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡಿದ್ದರು.

ನಂತರ ಖಾಸಗಿ ಕಂಪನಿಯಲ್ಲಿ ಉದ್ಯೋಗವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದರು. ಅವರ ಮಾತುಗಳನ್ನು ನಂಬಿ ಮಗಳನ್ನು ಅವರೊಂದಿಗೆ ಕಳಿಸಿದ್ದೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ.

ಪರಿಚಯವಿದ್ದ ಇಬ್ಬರು ಆರೋಪಿಗಳು ಇತರ ನಾಲ್ವರೊಂದಿಗೆ ಯುವತಿಯ ಮನೆಗೆ ಹೋಗಿ ಅವಳನ್ನು ತಮ್ಮೊಂದಿಗೆ ಬರುವಂತೆ ಮನವೊಲಿಸಿದ್ದಾರೆ.

ವಾಹನವು ಕಪ್ತಿಪಡ ಚೌಕ್‌ನಿಂದ ಬಾಲಸೋರ್ ಕಡೆಗೆ ಹೋಗುತ್ತಿದ್ದಾಗ, ಬಂಗಿರಿಪೋಸಿಯಿಂದ ಸುಮಾರು 70 ಕಿ.ಮೀ ದೂರದಲ್ಲಿ ವೇಳೆ ವ್ಯಾನ್‌ನೊಳಗೆ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಸಹಾಯಕ್ಕಾಗಿ ಆಕೆ ಕಿರುಚಿದಾಗ, ಆರೋಪಿಗಳು ಆಕೆಯನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದರು.

ಯುವತಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿ ಕರೆದೊಯ್ದು ಠಾಣೆಗೆ ದೂರು ನೀಡಿದ್ದಾರೆ. ಘಟನೆ ಕುರಿತು ಉಡಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಶನಿವಾರ ಬೆಳಗಿನ ಜಾವ ಇಬ್ಬರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.