Red Fort blast: ಅನಂತನಾಗ್ ಜಿಲ್ಲೆ ಅರಣ್ಯ ಪ್ರದೇಶದಲ್ಲಿ NIA ಶೋಧ
ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10 ರಂದು ನಡೆದ ಸ್ಫೋಟ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ (ಎನ್‌ಐಎ) ದಳ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಡಾ. ಅದೀಲ್ ರಾಥರ್ ಮತ್ತು ಜಾಸಿರ್ ಬಿಲಾಲ್ ವಾನಿ ಅವರನ್ನು ಪೊಲೀಸರು ಮತ್ತು ಸಿಆರ್‌ಪಿಎಫ್ ಸಹಾಯದಿಂದ ಎನ್‌ಐಎ ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



