ಪಾಕ್ ಜೊತೆಗೆ ನಂಟು: ಅರುಣಾಚಲ ಪ್ರದೇಶದಲ್ಲಿ ಮೂವರು ಕಾಶ್ಮೀರ ನಿವಾಸಿಗಳ ಬಂಧನ!
ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ 26 ವರ್ಷದ ವ್ಯಕ್ತಿಯನ್ನು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಗುವಾಹಟಿ/ನವದೆಹಲಿ: ಪಾಕಿಸ್ತಾನ ಜೊತೆಗೆ ನಂಟು ಹೊಂದಿದ ಆರೋಪದ ಮೇರೆಗೆ ಅರುಣಾಚಲ ಪ್ರದೇಶದಲ್ಲಿ ಮೂವರು ಕಾಶ್ಮೀರದ ನಿವಾಸಿಗಳನ್ನು ಬಂಧಿಸಲಾಗಿದೆ.
ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ 26 ವರ್ಷದ ವ್ಯಕ್ತಿಯನ್ನು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೆಲವೇ ವಾರಗಳಲ್ಲಿ ನಡೆದ ಮೂರನೇ ಬಂಧನ ಇದಾಗಿದೆ.
ಜಿಲ್ಲೆಯ ಆಲೋ ಪಟ್ಟಣದಲ್ಲಿ ವಾಸವಾಗಿದ್ದ ಆರೋಪಿ ಹಿಲಾಲ್ ಅಹ್ಮದ್ ನನ್ನು ಶುಕ್ರವಾರ ರಾತ್ರಿ ಹಿಮಾಲಯ ಗಡಿ ರಾಜ್ಯದ ಪೊಲೀಸರು ಬಂಧಿಸಿದ್ದಾರೆ. ಈತ ಪಾಕಿಸ್ತಾನದಲ್ಲಿರುವ ತಮ್ಮ ಹ್ಯಾಂಡ್ಲರ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎನ್ನಲಾಗಿದೆ.
ಇದೇ ಪ್ರದೇಶದಲ್ಲಿ ಸೈನಿಕರ ಚಲನವಲನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿ ಕಳುಹಿಸಿದ್ದಕ್ಕಾಗಿ ಮೊದಲ ಆರೋಪಿ ನಜೀರ್ ಅಹ್ಮದ್ ಮಲಿಕ್ ನನ್ನು ನವೆಂಬರ್ 22 ರಂದು ಬಂಧಿಸಲಾಗಿತ್ತು. ಈತ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿ ಎಂಬುದು ತಿಳಿದುಬಂದಿದೆ.
ತದನಂತರ, ಎರಡನೇ ಆರೋಪಿ, ಕುಪ್ವಾರದ ನಿವಾಸಿಯೂ ಆಗಿರುವ ಸಬೀರ್ ಅಹ್ಮದ್ ಮಿರ್‌ನನ್ನು ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಿಂದ ಬಂಧಿಸಲಾಗಿತ್ತು.

ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿ ಸೋರಿಕೆ: ಅಸ್ಸಾಂ ನಲ್ಲಿ ವಾಯುಪಡೆಯ ನಿವೃತ್ತ ಅಧಿಕಾರಿ, ಕಾಶ್ಮೀರಿಗಳ ಬಂಧನ
ಮೂವರು ಆರೋಪಿಗಳು ಜಮ್ಮು ಮತ್ತು ಕಾಶ್ಮೀರದಿಂದ 3,000 ಕಿಮೀ ದೂರದಲ್ಲಿರುವ ಅರುಣಾಚಲ ಪ್ರದೇಶದಲ್ಲಿ ವಾಸಿಸುವ ಮೂಲಕ ಪಾಕಿಸ್ತಾನದಲ್ಲಿರುವ ತಮ್ಮ ಹ್ಯಾಂಡ್ಲರ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


