ದೇವರಿಗೂ ವಿಶ್ರಾಂತಿ ಬೇಕು: ವಿಶೇಷ ಪೂಜೆ ಹೆಸರಿನಲ್ಲಿ ಶ್ರೀಮಂತರಿಂದ ದೇವರ ಶೋಷಣೆ; ಸುಪ್ರೀಂ ಕೋರ್ಟ್ ಅಸಮಾಧಾನ
ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಮುಚ್ಚಿದ ನಂತರವೂ ದೇವರಿಗೆ ಒಂದು ನಿಮಿಷವೂ ವಿಶ್ರಾಂತಿ ನೀಡುವುದಿಲ್ಲ. ಆ ವೇಳೆ ದೇವರನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಭಾರೀ ಹಣ ಪಾವತಿಸಬಲ್ಲ ಶ್ರೀಮಂತರಿಗೆ ವಿಶೇಷ ಪೂಜೆಗೆ ಅವಕಾಶ ನೀಡಲಾಗುತ್ತಿದೆ.

ನವದೆಹಲಿ: ಹಣ ಪಾವತಿಸಿ ವಿಶೇಷ ಪೂಜೆ ಹೆಸರಿನಲ್ಲಿ ಶ್ರೀಮಂತರಿಂದ ದೇವರ ಶೋಷಣೆಯಾಗುತ್ತಿದೆ ಎಂದು ಸುಪ್ರೀಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಶ್ರೀ ಕೃಷ್ಣನ ಆರಾಧನಾ ಸ್ಥಳವಾದ ಬಂಕೆ ಬಿಹಾರಿಜೀ ದೇಗುಲದಲ್ಲಿ ನ್ಯಾಯಾಲಯ ರಚಿಸಿದ್ದ ಸಮಿತಿ ನಿಗದಿಪಡಿಸಿದ್ದ ದರ್ಶನ ಸಮಯ ಮತ್ತು ದೇಗುಲ ಪದ್ದತಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿ ಕುರಿತಂತೆ ಉನ್ನತಾಧಿಕಾರ ಹೊಂದಿರುವ ದೇವಾಲಯ ನಿರ್ವಹಣಾ ಸಮಿತಿ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸುಪ್ರೀಂಕೋರ್ಟ್ ನೇಮಿಸಿದ ದೇವಾಲಯ ನಿರ್ವಹಣಾ ಸಮಿತಿ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಮಚೋಲಿ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು, ಪ್ರಕರಣದ ಮುಂದಿನ ವಿಚಾರಣೆ ಜನವರಿ ಮೊದಲ ವಾರದಲ್ಲಿ ನಡೆಸಲು ಪಟ್ಟಿ ಮಾಡಿತು.
ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಮುಚ್ಚಿದ ನಂತರವೂ ದೇವರಿಗೆ ಒಂದು ನಿಮಿಷವೂ ವಿಶ್ರಾಂತಿ ನೀಡುವುದಿಲ್ಲ. ಆ ವೇಳೆ ದೇವರನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಭಾರೀ ಹಣ ಪಾವತಿಸಬಲ್ಲ ಶ್ರೀಮಂತರಿಗೆ ವಿಶೇಷ ಪೂಜೆಗೆ ಅವಕಾಶ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



