ದೇಶ

ರೈಲ್ವೆ ಕ್ರಾಸಿಂಗ್ ನಲ್ಲಿ ಬೈಕಿಗೆ ರೈಲು ಡಿಕ್ಕಿ; ದಂಪತಿ, ಇಬ್ಬರು ಮಕ್ಕಳು ಸೇರಿ ಐವರು ಸಾವು!

ಈ ಐವರೂ ಒಂದೇ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

ರೈಲ್ವೆ ಕ್ರಾಸಿಂಗ್ ನಲ್ಲಿ ಬೈಕಿಗೆ ರೈಲು ಡಿಕ್ಕಿ; ದಂಪತಿ, ಇಬ್ಬರು ಮಕ್ಕಳು ಸೇರಿ ಐವರು ಸಾವು!
ಸಾಂದರ್ಭಿಕ ಚಿತ್ರ
Published On :

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಬುಧವಾರ ಸಂಜೆ ಪ್ರಯಾಣಿಕ ರೈಲೊಂದು ಹಳಿ ದಾಟುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಐವರೂ ಒಂದೇ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

ರೌಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಜಾ ರೈಲ್ವೆ ನಿಲ್ದಾಣದ ಬಳಿ, ಪಾದಚಾರಿ ಮಾರ್ಗದ ಮೂಲಕ ಬೈಕ್ ರೈಲು ಮಾರ್ಗವನ್ನು ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

"ಇಂದು ಸಂಜೆ 6.30 ರ ಸುಮಾರಿಗೆ, ಲಖನೌ ದಿಕ್ಕಿನಿಂದ ಬರುತ್ತಿದ್ದ ಪ್ಯಾಸೆಂಜರ್ ರೈಲು, ಹಳಿ ದಾಟುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದರು" ಎಂದು ದ್ವಿವೇದಿ ಹೇಳಿದ್ದಾರೆ.

ಮೃತರನ್ನು ಲಖಿಂಪುರ ಜಿಲ್ಲೆಯ ವಂಕಾ ಗ್ರಾಮದ ನಿವಾಸಿ ಸೇಠ್‌ಪಾಲ್(40), ಅವರ ಪತ್ನಿ ಪೂಜಾ(38), ಅವರ ನಾಲ್ಕು ರಿಂದ ಆರು ವರ್ಷದೊಳಗಿನ ಇಬ್ಬರು ಮಕ್ಕಳು ಮತ್ತು ಸೇಠ್‌ಪಾಲ್ ಅವರ ಸೋದರ ಮಾವ ಹರಿ ಓಂ(45) ಎಂದು ಗುರುತಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.