'ಹಿಂದೂ ಭಾವನೆ'ಗಳಿಗೆ ಧಕ್ಕೆ: ಚರ್ಚ್ ಹೊರಗೆ ಬಜರಂಗದಳ ಪ್ರತಿಭಟನೆ, ಹನುಮಾನ್ ಚಾಲೀಸಾ ಪಠಣ! Video
ಚರ್ಚ್‌ನ ಮುಖ್ಯ ದ್ವಾರದ ಬಳಿ ಕುಳಿತ ಪ್ರತಿಭಟನಾಕಾರರು ಜೈ ಶ್ರೀ ರಾಮ್' ಮತ್ತು 'ಹರ್ ಹರ್ ಮಹಾದೇವ್' ಎಂದು ಘೋಷಣೆಗಳನ್ನು ಕೂಗಿದರು.

ಬರೇಲಿ: ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂ ಧರ್ಮ ಮತ್ತು ಸಮಾಜವನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಬಜರಂಗದಳದ ಸದಸ್ಯರು ರಾಯ್ ಬರೇಲಿಯ ಸೇಂಟ್ ಅಲ್ಫೋನ್ಸ್ ಕ್ಯಾಥೆಡ್ರಲ್ ಚರ್ಚ್‌ನ ಹೊರಗೆ ಪ್ರತಿಭಟನೆ ನಡೆಸಿ ‘ಹನುಮಾನ್ ಚಾಲೀಸಾ’ ಪಠಿಸಿದರು.
ಚರ್ಚ್‌ನ ಮುಖ್ಯ ದ್ವಾರದ ಬಳಿ ಕುಳಿತ ಪ್ರತಿಭಟನಾಕಾರರು ಜೈ ಶ್ರೀ ರಾಮ್' ಮತ್ತು 'ಹರ್ ಹರ್ ಮಹಾದೇವ್' ಎಂದು ಘೋಷಣೆಗಳನ್ನು ಕೂಗಿದರು. ಕ್ರಿಸ್ಮಸ್ ಹಬ್ಬವು ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅವರು ಆರೋಪಿಸಿದರು.
ಅಲ್ಲದೇ, ಪ್ರತಿಭಟನೆಯ ಸಮಯದಲ್ಲಿ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ಧಾವಿಸಿದರು.
ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಜರಂಗದಳ ಕಾರ್ಯಕರ್ತರು ನಗರ ಸರ್ಕಲ್ ಇನ್ಸ್ ಪೆಕ್ಟರ್ ಅಶುತೋಷ್ ಶಿವಂ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


