ದೇಶ

ಕಾಶ್ಮೀರ ಮಾರುಕಟ್ಟೆ ಪ್ರದೇಶದಲ್ಲಿ LET ಉಗ್ರರ ಓಡಾಟ: CCTVಯಲ್ಲಿ ದೃಶ್ಯ ಸೆರೆ, ಭದ್ರತಾಪಡೆಗಳಿಂದ ತೀವ್ರ ಶೋಧ

ಮಾರುಕಟ್ಟೆ ಪ್ರದೇಶದಲ್ಲಿ ಉಗ್ರರು ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಗಾಗಿ ತೀವ್ರ ಹುಡುಕಾಟ ಪ್ರಾರಂಭಿಸಿದೆ.

ಕಾಶ್ಮೀರ ಮಾರುಕಟ್ಟೆ ಪ್ರದೇಶದಲ್ಲಿ LET ಉಗ್ರರ ಓಡಾಟ: CCTVಯಲ್ಲಿ ದೃಶ್ಯ ಸೆರೆ, ಭದ್ರತಾಪಡೆಗಳಿಂದ ತೀವ್ರ ಶೋಧ
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಉಗ್ರರು ಪತ್ತೆಯಾಗಿರುವುದು.
Published On :

ಅನಂತ್ ನಾಗ್ (ಜಮ್ಮು-ಕಾಶ್ಮೀರ): ದಕ್ಷಿಣ ಕಾಶ್ಮೀರದ ಸ್ಥಳೀಯ ಮಾರುಕಟ್ಟೆ ಪ್ರದೇಶದಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಕಾಣಿಸಿಕೊಂಡಿದ್ದು, ಉಗ್ರರಿಗಾಗಿ ಭದ್ರತಾಪಡೆಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಮಾರುಕಟ್ಟೆ ಪ್ರದೇಶದಲ್ಲಿ ಉಗ್ರರು ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಗಾಗಿ ತೀವ್ರ ಹುಡುಕಾಟ ಪ್ರಾರಂಭಿಸಿದೆ. ಪ್ರಸ್ತುತ ಡೆಂಗರ್ಪೋರಾ ಮತ್ತು ಕಾಜಿಬಾಗ್ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿರುವ ಇಬ್ಬರು ಉಗ್ರರನ್ನು ಕುಲ್ಗಾಂಮ್ ಜಿಲ್ಲೆಯ ಖೆರ್ವಾನ್ ನಿವಾಸಿ ಮೊಹಮದ್ ಲತೀಫ್ ಭಟ್ ಹಾಗೂ ಪಾಕಿಸ್ತಾನದ ಹಂಜುಲ್ಲಾ ಎಂದು ಅನುಮಾನಿಸಲಾಗಿದೆ, ಆದರೆ, ಈ ಬಗ್ಗೆ ಅಧಿಕೃತ ದೃಢೀಕರಣಗಳು ಇನ್ನೂ ತಿಳಿದುಬಂದಿಲ್ಲ.

ಶಂಕಿತರನ್ನು ಪತ್ತೆಹಚ್ಚಲು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಶೋಧ ನಡೆಸುತ್ತಿದ್ದಾರೆ.

ಭಯೋತ್ಪಾದಕರ ಚಲನವಲನಗಳನ್ನು ಪತ್ತೆ ಮಾಡಲು ಭದ್ರತಾಪಡೆಗಳು ಗುಪ್ತಚರ ಹಾಗೂ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.