ದೇಶ

Parivar together: ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಅಜಿತ್ ಪವಾರ್ ಮೈತ್ರಿ ಘೋಷಣೆ!

ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಬಣದೊಂದಿಗೆ ಮುಂಬರುವ ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

Parivar together: ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಅಜಿತ್ ಪವಾರ್ ಮೈತ್ರಿ ಘೋಷಣೆ!
ಶರದ್ ಪವಾರ್ ಮತ್ತು ಅಜಿತ್ ಪವಾರ್
Published On :

ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಒಡೆದು ಹೋಗಿದ್ದ ರಾಷ್ಟ್ರೀಯ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಬಣಗಳು ಪಿಂಪ್ರಿ-ಚುಂಚ್​ವಾಡ್ ಪುರಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ಡಿಸಿಎಂ ಅಜಿತ್ ಪವಾರ್ ಘೋಷಣೆ ಮಾಡಿದ್ದಾರೆ.

ಡಿಸಿಎಂ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಬಣದೊಂದಿಗೆ ಮುಂಬರುವ ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಇದು ಒಡೆದು ಹೋಗಿದ್ದ ಎರಡೂ ಪಕ್ಷದ ಪುನರ್ಮಿಲನ ಎನ್ನಲಾಗಿದೆ.

ಜನವರಿ 15 ರ ಚುನಾವಣೆಗೆ ಮುನ್ನ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅಜಿತ್ ಪವಾರ್, "ಈ ಪುರಸಭೆ ಚುನಾವಣೆಗಳಿಗಾಗಿ, 'ಗಡಿಯಾರ' ಮತ್ತು 'ತುತ್ತೂರಿ' (ಕಹಳೆ) ಒಟ್ಟಿಗೆ ಬಂದಿವೆ. ಪರಿವಾರ ಒಗ್ಗಟ್ಟಾಗಿದೆ" ಎಂದು ಹೇಳಿದರು.

ಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಬೇಕು ಮತ್ತು ರ್ಯಾಲಿಗಳ ಸಮಯದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

"ನಾವು ಪ್ರಗತಿಗಾಗಿ ಕೆಲಸ ಮಾಡುತ್ತಿದ್ದೇವೆ. ಪುರಸಭೆಯ ಮೇಲೆ ಸಾಲದ ಹೊರೆ ಹೊರಿಸಲು ಪ್ರಯತ್ನಿಸಿದವರನ್ನು ನಾವು ಹೊರಗೆ ತಳ್ಳುತ್ತೇವೆ" ಎಂದು ಅವರು ಹೇಳಿದರು. ಪುಣೆ ಪುರಸಭೆ ಚುನಾವಣೆಗೆ ಸಂಭಾವ್ಯ ಮೈತ್ರಿಗಾಗಿ ಎನ್‌ಸಿಪಿಯ ಎರಡು ಬಣಗಳ ನಡುವೆ ಮಾತುಕತೆ ನಡೆಯುತ್ತಿದೆ.

ಭಾನುವಾರದಂದು ಪವಾರ್ ಕುಟುಂಬವು ಬಾರಾಮತಿಯಲ್ಲಿತ್ತು, ಅಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಶರದ್‌ಚಂದ್ರ ಪವಾರ್ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಉದ್ಘಾಟಿಸಿದರು.

ಪಿಂಪ್ರಿ-ಚಿಂಚ್‌ವಾಡ್ ಮತ್ತು ಪುಣೆ ಸೇರಿದಂತೆ ಮಹಾರಾಷ್ಟ್ರದಾದ್ಯಂತ 29 ಪುರಸಭೆಗಳಿಗೆ ಚುನಾವಣೆ ಜನವರಿ 15 ರಂದು ನಡೆಯಲಿದ್ದು, ಮರುದಿನ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 30 ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.